ತುಮಕೂರು: ಇಂದು 16ನೇ ಶತಮಾನದ ವಿಜಯನಗರ ಸಾಮ್ರಾಜ್ಯದ ನಾಯಕ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ. ನಾಡಿನಾದ್ಯಂತ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ನಾಡಪ್ರಭು ಶ್ರೀ ಕೆಂಪೇಗೌಡ ಅಧ್ಯಯನ ಪೀಠದ ವತಿಯಿಂದ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯ ಅಂಗವಾಗಿ ಕುಲಸಚಿವೆ ನಾಹಿದಾ ಜಮ್ ಜಮ್ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಅಧ್ಯಯನ ಪೀಠದ ಸಂಯೋಜಕ ಡಾ. ಸುರೇಶ್ ಡಿ., ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಣ್ಣ ಬೆಳವಾಡಿ, ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಚ್. ಎಸ್. ಬೋರೇಗೌಡ ಉಪಸ್ಥಿತರಿದ್ದರು.