News Karnataka Kannada
Wednesday, April 24 2024
Cricket
ತುಮಕೂರು

ಏ.3, ಬೃಹತ್ ಮೆರವಣಿಗೆಯಲ್ಲಿ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತಿಯ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ  ಅವರು ಏ.3ರಂದು ಬುಧವಾರ ಮತ್ತೊಂದು ಸುತ್ತಿನ ನಾಮಪತ್ರ ಸಲ್ಲಿಸಲಿದ್ದಾರೆ.
Photo Credit : NewsKarnataka

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತಿಯ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ  ಅವರು ಏ.3ರಂದು ಬುಧವಾರ ಮತ್ತೊಂದು ಸುತ್ತಿನ ನಾಮಪತ್ರ ಸಲ್ಲಿಸಲಿದ್ದಾರೆ.

ಈ ವೇಳೆ ಬೃಹತ್ ಮೆರವಣಿಗೆ ನಡೆಸಲಾಗುತ್ತಿದ್ದು,  ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ಹಲವು ನಾಯಕರು ಈ ವೇಳೆ ಭಾಗವಹಿಸಲಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಾಗು ಜೆಡಿಎಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ, 3ರಂದು ಬೆಳಿಗ್ಗೆ 11.55ಕ್ಕೆ ವಿನಾಯಕ ನಗರದ ಗಣಪತಿ, ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಎರಡೂ ಪಕ್ಷಗಳ 50ಸಾವಿರಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳ ಬೃಹತ್ ಮೆರವಣಿಗೆಯಲ್ಲಿ ತೆರಳಿ ಮಧ್ಯಾಹ್ನ 1.35ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು.

ಈಗಾಗಲೇ ಲೋಕಸಭಾ ಕ್ಷೇತ್ರದ ಎಂಟೂ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್‌ನ ಸಮನ್ವಯ ಸಭೆಗಳನ್ನು  ಮಾಡಲಾಗಿದೆ. ನಾಮಪತ್ರ ಸಲ್ಲಿಕೆಯಾದ ನಂತರ ಈ ತಿಂಗಳ 4ರಿಂದ 7ರವರೆಗೆ ನಾಲ್ಕು ದಿನಕಾಲ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ರಾಮ ಪಂಚಾಯ್ತಿ ಕೇಂದ್ರಗಳಿಗೆ ಹೋಗಬೇಕೆಂಬ ಬಯಕೆಯಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚುನಾವಣೆ ನಂತರ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದರು.

ಕ್ಷೇತ್ರಾದ್ಯಂತ ಬಿಜೆಪಿ, ಜೆಡಿಎಸ್ ನಾಯಕರು ಒಟ್ಟಾಗಿ ಚುನಾವಣೆ ಪ್ರಚಾರ ಮಾಡಲು ತೀರ್ಮಾನ ಮಾಡಿ,  ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕ ಅಮಿತ್ ಷಾ ಅವರು ತುಮಕೂರು ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ವಿ.ಸೋಮಣ್ಣ ಹೇಳಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಅಂಜನಪ್ಪ ಮಾತನಾಡಿ, ಈ ತಿಂಗಳ ೩ರಂದು ವಿ.ಸೋಮಣ್ಣ ಅವರು  ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಎರಡೂ ಪಕ್ಷಗಳ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವರು, ಗಣಪತಿ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕುಮಾರಸ್ವಾಮಿಯವರು ಭಾಗವಹಿಸುತ್ತಿರುವ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ ಎಂದರು.

ವಿ.ಸೋಮಣ್ಣ ಅವರು ಉತ್ತಮ ಅಭ್ಯರ್ಥಿ, ಸರಳಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದಾರೆ. ತಮ್ಮ ಕಾರ್ಯವೈಖರಿಯಿಂದ  ಕಲ್ಲನ್ನೂ ಮಾತನಾಡಿಸಬಲ್ಲ ಶಕ್ತಿ ಇವರಿಗಿದೆ. ಸೋಮಣ್ಣ ಅವರು ಎರಡು ಲಕ್ಷ ಮತಗಳ ಅಂತದಿಂದ ಚುನಾವಣೆ ಗೆಲ್ಲುವ ವಿಶ್ವಾಸವಿದೆ. ಗೆದ್ದ ನಂತರ ಅವರಿಂದ ತುಮಕೂರು ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ನಿರೀಕ್ಷಿಸಬಹುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ  ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಶಾಸಕ ಮಸಾಲೆ ಜಯರಾಂ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜ್, ನಗರ ಅಧ್ಯಕ್ಷ ವಿಜಯ್‌ಗೌಡ, ನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಮಾಜಿ ಉಪಮೇಯರ್ ಟಿ.ಕೆ.ನರಸಿಂಹಮೂರ್ತಿ, ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗೇಶ್, ಮುಖಂಡರಾದ ಶ್ರೀನಿವಾಸ ಪ್ರಸಾದ್, ರವೀಶ್ ಜಹಂಗೀರ್, ವಕ್ತಾರ ಜೆ.ಜಗದೀಶ್, ಸೇರಿದಂತೆ ನಗರ ಪಾಲಿಕೆ ಮಾಜಿ ಸದಸ್ಯರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು