News Karnataka Kannada
Tuesday, April 30 2024
ತುಮಕೂರು

ತುಮಕೂರು: ಹೆಚ್ಚಿನ ಹೋಮ್‌ ವರ್ಕ್ ಕೊಟ್ಟ ಶಿಕ್ಷಕನ ವಿರುದ್ಧ ಬಿತ್ತು ಪೋಕ್ಸೊ ಕೇಸ್

POCSO case
Photo Credit : News Kannada

ತುಮಕೂರು: ವಿದ್ಯಾರ್ಥಿಗಳಿಗೆ ಹೆಚ್ಚಿನ ಹೋಮ್ ವರ್ಕ್ ನೀಡಿ ತರಗತಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ  ಮೇಲೆ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಚಿಕ್ಕನಾಯಕನಹಳ್ಳಿ ಪೊಲೀಸರ ಪ್ರಕಾರ, ಗೊಡೆಕೆರೆ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಎಚ್.ಎಸ್.ರವಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೋಮ್ ವರ್ಕ್ ನೀಡುತ್ತಿದ್ದರು. ಆದರೆ ಮಕ್ಕಳು ಅದನ್ನು ಪೂರ್ಣಗೊಳಿಸಲು ವಿಫಲವಾದರೆ, ಶಿಕ್ಷಕ ತರಗತಿಯಲ್ಲಿ ಅವರಿಗೆ ಚಿತ್ರಹಿಂಸೆ ನೀಡುತ್ತಿದ್ದನು.

ಚಿತ್ರಹಿಂಸೆಯನ್ನು ಸಹಿಸಲಾಗದೆ, ವಿದ್ಯಾರ್ಥಿಗಳು ಶಿಕ್ಷಕನ ಬಗ್ಗೆ ತಮ್ಮ ಪೋಷಕರಿಗೆ ದೂರು ನೀಡಿದರು. ಅಲ್ಲದೆ ಭಯದಿಂದ  ಶಾಲೆಗೆ ಹೋಗಲು ನಿರಾಕರಿಸಿದರು.

ಹೀಗಾಗಿ ಪೋಷಕರು ಚಿಕ್ಕನಾಯಕನಹಳ್ಳಿ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು