News Karnataka Kannada
Friday, April 12 2024
Cricket
ತುಮಕೂರು

ತುಮಕೂರು ವಿವಿಗೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಆಹ್ವಾನಕ್ಕೆ ವಿರೋಧಿಸಿ ಜು.20ರಂದು ಪ್ರತಿಭಟನೆ

Protest against journalist Ajith Hanumakkanavar's invitation to Tumakuru University on July 20
Photo Credit : News Kannada

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಕೋಮುವಾದಿ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಕರೆಸುತ್ತಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ-ಯುವಜನರ ವೇದಿಕೆ ಹಾಗೂ ವಿವಿ ಹಳೆಯ ವಿದ್ಯಾರ್ಥಿಗಳ ವೇದಿಕೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ತುಮಕೂರು ವಿಶ್ವವಿದ್ಯಾಲಯ ಜಾತ್ಯತೀತ ಪರಂಪರೆಯನ್ನು ಹೊಂದಿದ್ದು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ಇಂತಹ ಮಹತ್ವದ ಪರಂಪರೆಯನ್ನು ಸಾರುತ್ತಿರುವ ವಿಶ್ವವಿದ್ಯಾಲಯದಲ್ಲಿ ಮತೀಯ ಭಾವನೆಗಳನ್ನು ಕೆರಳಿಸುವ, ವಿಛಿದ್ರಕಾರಿ ಸಂಗತಿಗಳನ್ನು ಪ್ರತಿಪಾದಿಸುವ ಪತ್ರಕರ್ತ ಅಜಿತ್ ಹನುಮಕ್ಕನವ್ ಅವರನ್ನು ಯಾವುದೇ ಕಾರಣಕ್ಕೂ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆಸುವುದು ಬೇಡ ಎಂದು ಆಗ್ರಹಿಸಿದರು.

ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ ನಡೆಯುತ್ತಿದೆ. ಇಂತಹ ಹಬ್ಬಕ್ಕೆ ಅಜಿತ್ ಹನುಮಕ್ಕನವರ್ ಅವರಿಂದ ಕೋಮುವಾದಿ ಭಾಷಣ ಮಾಡಿಸಲು ಹೊರಟಿರುವ ವಿವಿಯ ಕ್ರಮ ಪ್ರಶ್ನಾರ್ಹವಾಗಿದೆ. ಅಲ್ಲದೆ ವಿವಿಯ ಪರಂಪರೆಯನ್ನು ನಾಶ ಮಾಡಲು ಹುನ್ನಾರ ನಡೆಸಲಾಗುತ್ತಿದೆ. ಶಾಂತಿ-ಸುವ್ಯವಸ್ಥೆಯನ್ನು ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ವಿವಿಯ ಕ್ರಮವನ್ನು ಖಂಡಿಸಿ ಮತ್ತು ಇತ್ತೀಚೆಗೆ ಕೋಮುವಾದಿ ಚಟುವಟಿಕೆಗಳು ಹೆಚ್ಚಳವಾಗಿದ್ದು, ಇದನ್ನು ಖಂಡಿಸಿ ಜುಲೈ 20ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಗಳು ತಿಳಿಸಿವೆ.

ಇಂದು ಕುಲಪತಿಗಳು ಮತ್ತು ಕುಲಸಚಿವರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ ಅಜಿತ್ ಹನುಮಕ್ಕನವರ್ ಅವರ ಆಹ್ವಾನಿಸಿರುವುದನ್ನು ಕೈಬಿಡುವಂತೆ ಒತ್ತಾಯಿಸಲಾಯಿತು ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ದ ಶಿಸ್ಸುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸಿಂಡಿಕೇಟ್ ಮಾಜಿ ಸದಸ್ಯ ಕೊಟ್ಟಶಂಕರ್, ಪ್ರಗತಿಪರ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಗೋಪಿನಾಥ್, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಅರುಣ್, ವಕೀಲ ರಂಗಧಾಮಯ್ಯ, ಉಪನ್ಯಾಸಕ ಮೂರ್ತಿ, ವಕೀಲ ಹಾಗೂ ಎಸ್ಎಫ್ಐ ಜಿಲ್ಲಾಧ್ಯಕ್ಷ ಈ ಶಿವಣ್ಣ, ಹಳೆಯ ವಿದ್ಯಾರ್ಥಿ ಒಕ್ಕೂಟದ ಮುಖಂಡ ಎಚ್.ವಿ.ರಮೇಶ್, ಬಂಡೆಕುಮಾರ, ಮೂರ್ತಿ ಕೆಸ್ತೂರು, ವಾಸುದೇವ್ ಎನ್ ನಾದೂರ್, ಛಲವಾದಿ ಮಹಾಸಭಾದ ಶೇಖರ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು