News Karnataka Kannada
Sunday, April 21 2024
Cricket
ತುಮಕೂರು

ಜನರೊಂದಿಗೆ ಬೆರೆತು ಕೆಲಸ ಮಾಡುವ ಭರವಸೆ ನೀಡಿದ ಸೋಮಣ್ಣ

ತುಮಕೂರು ಲೋಕಸಭಾ ಚುನಾವಣೆ ಸ್ಪರ್ಧೆ ನನಗೆ ಅನಿರೀಕ್ಷಿತವಾಗಿ ಸಿಕ್ಕ ಅವಕಾಶ ಪಕ್ಷ ಈ ಅವಕಾಶ  ನೀಡಿದೆ. ಅನೇಕರು ಅನೇಕ ರೀತಿಯಲ್ಲಿ ಮಾತನಾಡಬಹುದು, 45 ವರ್ಷಗಳಿಂದ ರಾಜಕೀಯ ಜೀವನದಲ್ಲಿ ನಾನು ಮಾಡಿಕೊಂಡುಬಂದ ಕಾಯಕ, ಸಂಸ್ಕಾರ ಜೀವನ ತೆರೆದ ಕನ್ನಡಿ ಇದ್ದಂತೆ. ತುಮಕೂರು ಜಿಲ್ಲೆಯ ವಾತಾವರಣ ಅಸ್ತಿರಗೊಳಿಸಲು ನಾನು ಬಂದಿಲ್ಲ, ಅಸ್ತಿರಗೊಂಡಿರುವುದನ್ನು ಸುಸ್ತಿರಗೊಳಿಸಿ ಸೌಹಾರ್ದ ವಾತಾವರಣ ನಿರ್ಮಾಣ ಮಾಡುವ ಆಶಯದೊಂದಿಗೆ ಬಂದಿದ್ದೇನೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
Photo Credit : By Author

ತುಮಕೂರು: ತುಮಕೂರು ಲೋಕಸಭಾ ಚುನಾವಣೆ ಸ್ಪರ್ಧೆ ನನಗೆ ಅನಿರೀಕ್ಷಿತವಾಗಿ ಸಿಕ್ಕ ಅವಕಾಶ ಪಕ್ಷ ಈ ಅವಕಾಶ  ನೀಡಿದೆ. ಅನೇಕರು ಅನೇಕ ರೀತಿಯಲ್ಲಿ ಮಾತನಾಡಬಹುದು, 45 ವರ್ಷಗಳಿಂದ ರಾಜಕೀಯ ಜೀವನದಲ್ಲಿ ನಾನು ಮಾಡಿಕೊಂಡುಬಂದ ಕಾಯಕ, ಸಂಸ್ಕಾರ ಜೀವನ ತೆರೆದ ಕನ್ನಡಿ ಇದ್ದಂತೆ. ತುಮಕೂರು ಜಿಲ್ಲೆಯ ವಾತಾವರಣ  ಅಸ್ತಿರಗೊಳಿಸಲು ನಾನು ಬಂದಿಲ್ಲ, ಅಸ್ತಿರಗೊಂಡಿರುವುದನ್ನು ಸುಸ್ತಿರಗೊಳಿಸಿ ಸೌಹಾರ್ದ ವಾತಾವರಣ ನಿರ್ಮಾಣ ಮಾಡುವ ಆಶಯದೊಂದಿಗೆ ಬಂದಿದ್ದೇನೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಏರ್ಪಡಿಸಿದ್ದ ಮಾಧ್ಯಮ  ಸಂವಾದದಲ್ಲಿ ಮಾತನಾಡಿದ ವಿ.ಸೋಮಣ್ಣ, ಈ ಚುನಾವಣೆ ದೇಶದ ಜವಾಬ್ದಾರಿ ನಿರ್ವಹಣೆ ನಿರ್ಧರಿಸುವ ಮಹತ್ವದ ಚುನಾವಣೆ. ಈ ದೇಶವನ್ನು ಯಾರು ಸಮರ್ಥವಾಗಿ ಮುನ್ನಡೆಸಬೇಕು, ಮುಂದಿನ ತಲೆಮಾರಿಗೂ ದೇಶವನ್ನು ಸುಭದ್ರವಾಗಿ ಕಾಪಾಡುವ ದೊಡ್ಡ ಸಂದೇಶ ನೀಡುವಂತಹ ಈ ಚುನಾವಣೆ ಬಗ್ಗೆ ಹೊರ ದೇಶದವರೂ ಕುತೂಹಲದಿಂದ ಗಮನಿಸುತ್ತಿದ್ದಾರೆ.

ಎನ್‌ಡಿಎ ಕೂಟದ ನರೇಂದ್ರ ಮೋದಿ ಹಾಗೂ ‘ಇಂಡಿಯಾ’ ಒಕ್ಕೂಟದಿಂದ ರಾಹುಲ್ ಗಾಂಧಿಯೋ ಇನ್ಯಾರೂ ದೇಶದ ಆಡಳಿತ ಚುಕ್ಕಾಣಿ ಹಿಡಿಯಬೇಕು ಎನ್ನುವ ವಿಚಾರದಲ್ಲಿ ಇವರಲ್ಲಿ ಯಾರು ಸಮರ್ಥರು ಎಂದು ನಿಧರಿಸುವ ಚುನಾವಣೆ ಇದಾಗಿದೆ. ಆದರೆ ಜಗತ್ತು ಮೆಚ್ಚಿನ ನಾಯಕ ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ, ಈ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನನ್ನನ್ನು ಆಯ್ಕೆ ಮಾಡಿ ಮೋದಿಯವರ ಕೈ ಬಲಪಡಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್‌ನವರು ನನ್ನನ್ನು ಹೊರಗಿನ ಅಭ್ಯರ್ಥಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಇಂತಹ  ಕ್ಷಲ್ಲಕ ರಾಜಕಾರಣ ಮಾಡಿಕೊಂಡೇ ಬಂದವರು. ಇಂದಿರಾ ಗಾಂಧಿ ಚಿಕ್ಕಮಗಳೂರಿನಲ್ಲಿ, ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ, ರಾಹುಲ್ ಗಾಂಧಿ ವಯನಾಡಿನಲ್ಲಿ ಸ್ಪರ್ಧೆ ಮಾಡಲು ಯಾರು ಕರೆತಂದರು? ನಾನು ಪಕ್ಕದ ಜಿಲ್ಲೆಯವನಷ್ಟೇ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ಬೆಂಗಳೂರು ಗ್ರಾಮಾಂತರ ಕ್ಷೇತ್ರದವರು, ಅವರು ಬೆಂಗಳೂರು ನಿವಾಸಿಯಲ್ಲವೆ? ಗೃಹ ಸಚಿವ ಡಾ.ಪರಮೇಶ್ವರ್ ಅವರು ಕೊರಟಗೆರೆ ಕ್ಷೇತ್ರದ ನಿವಾಸಿಯೆ? ಸಚಿವ ಕೆ.ಎನ್.ರಾಜಣ್ಣ ಮಧುಗಿರಿಯಲ್ಲಿ ವಾಸ ಮಾಡುತ್ತಿದ್ದಾರೆಯೆ? ನಾನೂ ತುಮಕೂರಿನಲ್ಲಿ ಮನೆ ಮಾಡಿ ವಾಸ ಮಾಡುತ್ತಿದ್ದೇನೆ ಎಂದು ವಿ.ಸೋಮಣ್ಣ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ತುಮಕೂರು ಜಿಲ್ಲೆಗೂ ನನಗೂ 35 ವರ್ಷಗಳ ಅವಿನಾಭಾವ ಸಂಬಂಧವಿದೆ. ನನ್ನ ಆರಾಧ್ಯ ದೈವ ಸಿದ್ಧಗಂಗಾ ಮಠದ  ಡಾ.ಶಿವಕುಮಾರ ಸ್ವಾಮೀಜಿಗಳ ಸೇವೆ ಮಾಡಿಕೊಂಡು ಬಂದಿದ್ದೇನೆ. ಆದಿಚುಂಚನಗಿರಿ ಸಂಸ್ಥಾನದ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ಪರಮ ಭಕ್ತ ನಾನು, ಈ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿರುವ ನನಗೆ ಜಿಲ್ಲೆಯ ಸಮಗ್ರ ಪರಿಚಯವಿದೆ, ಇಲ್ಲಿನ ಸಮಸ್ಯೆಗಳು, ಅಗತ್ಯತೆಗಳ ಬಗ್ಗೆಯೂ ಗೊತ್ತಿದೆ ಎಂದರು.

ಸೂರ್ಯ, ಚಂದ್ರ ಹುಟ್ಟುವುದು ಎಷ್ಟು ನಿಜವೋ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಅಷ್ಟೇ  ನಿಜ. ಜನಸಾಮಾನ್ಯರಿಗಾಗಿ ಮೋದಿಯವರ ಸರ್ಕಾರ ನೂರಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಬಳಸಿಕೊಂಡು ರೈತರು, ಬಡವರು, ಕಾರ್ಮಿಕರು, ಹೆಣ್ಣುಮಕ್ಕಳ ಬದುಕು ಸುಧಾರಣೆಗೆ ಕಾಳಜಿಯಿಂದ ಕೆಲಸ ಮಾಡುವುದಾಗಿ ಹೇಳಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ವಿ.ಸೋಮಣ್ಣ ಅವರಿಗೆ ಸಂವಿಧಾನ ಕೃತಿ ನೀಡಿ  ಸ್ವಾಗತಿಸಿದರು, ಪತ್ರಕರ್ತರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಸೋಮಣ್ಣರ ಗಮನಕ್ಕೆ ತಂದ ಅವರು, ಸಂಸದರಾಗಿ ಆಯ್ಕೆಯಾದರೆ ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಶಾಸಕ ಸುರೇಶ್‌ಗೌಡ, ಜಿಲ್ಲಾ ಬಿಜೆಪಿ ಅಧಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಬಿಜೆಪಿ ಮುಖಂಡರಾದ ಎಸ್.ಪಿ.ಚಿದಾನಂದ್, ಅನಿಲ್‌ಕುಮಾರ್, ಎಸ್.ಶಿವಪ್ರಸಾದ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್,  ರಾಷ್ಟ್ರೀಯ ಮಂಡಳಿ ಸಂಘಟನಾ ಕಾರ್ಯದರ್ಶಿ ಡಿ.ಎಂ.ಸತೀಶ್,ರಾಷ್ಟ್ರೀಯ ಮಂಡಳಿ ಸದಸ್ಯ ಶಾಂತರಾಜು, ಹಿರಿಯ ಪತ್ರಕರ್ತ ಬಿ.ವಿ.ಮಲ್ಲಿಕಾರ್ಜುನಯ್ಯ,  ಮೊದಲಾದವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು