Categories: ತುಮಕೂರು

ಸುರೇಶಗೌಡರಿಗೆ 50 ಸಾವಿರ ಅಂತರದ ಗೆಲುವು ನಿಶ್ಚಿತ- ಯಡಿಯೂರಪ್ಪ

ತುಮಕೂರು: ಸುರೇಶಗೌಡರು ಇಡೀ ರಾಜ್ಯದಲ್ಲೇ ಮಾದರಿ ಶಾಸಕರಂತೆ ಕೆಲಸ ಮಾಡಿದ್ದರು. ಸುರೇಶಗೌಡರನ್ನು ದ್ರೋಹದಿಂದ, ಮೋಸದಿಂದ ಸೋಲಿಸುತ್ತಾರೆ ಎಂದು ನಾನು ಅಂದು ಕೊಂಡಿರಲಿಲ್ಲ. ನಾನು ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಿದ ಸುರೇಶ ಗೌಡರನ್ನು ಈ ಸಲ 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿಕೊಡಬೇಕು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮಾಂತರದ ಜನರಿಗೆ ಮನವಿ ಮಾಡಿದರು.

ಸುರೇಶ ಗೌಡರನ್ನು ಕಳೆದ ಸಲ ಮೋಸದಿಂದ ಸೋಲಿಸಿದ್ದಾರೆ. ಈ ಸಲ ಅವರನ್ನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಬಾಂಧವರು ಎಲ್ಲರೂ ಸೇರಿ ಈ ಬಾರಿ ಗೆಲ್ಲಿಸಬೇಕು. ಎಲ್ಲರೂ ಸೇರಿಕೊಂಡು ಅವರ ಗೆಲುವಿಗೆ ಕೆಲಸ ಮಾಡಬೇಕು. ಅವರಿಗೆ ಮೋಸ ಮಾಡದಂತೆ ನೋಡಿಕೊಳ್ಳಬೇಕು ಎಂದರು. ಸುರೇಶ ಗೌಡರು ದೇಶಕ್ಕೆ ಮಾದರಿಯಾದ ಶಾಸಕರು. ಅವರಿಗೆ ಯಾವತ್ತೂ ಮೋಸವಾಗದಂತೆ ಇಲ್ಲಿನ ಜನರೇ ನೋಡಿಕೊಳ್ಳಬೇಕು ಎಂದರು. ಸೇರಿದ್ದ ಸಹಸ್ರಾರು ಜನರು ಸಿಳ್ಳೆ, ಕೇಕೆ ಹೊಡೆದರು.

ಜಿಲ್ಲೆಯ ಅಭಿವೃದ್ಧಿ ಗೆ ಬಿಜೆಪಿ ಸರ್ಕಾರ ಕೊಡುಗೆ ನೀಡಿದೆ. ಮಾಜಿ ಸಂಸದರಾಗಿದ್ದ ಎಸ್.ಪಿ.ಮುದ್ದಹನುಮೇಗೌಡರು, ಸಂಸದ ಜಿ.ಎಸ್.ಬಸವರಾಜ್ ಸಾಕಷ್ಟು ಕೆಲಸ ಮಾಡಿದ್ದಾರೆ. ಇವರೆಲ್ಲರ ಆರ್ಶೀವಾದದಿಂದ ಸುರೇಶಗೌಡರನ್ನು ಭಾರೀ ಅಂತರದಿಂದ ಗೆಲ್ಲಿಸಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ಕರ್ನಾಟಕವನ್ನು ಅಭಿವೃದ್ಧಿಗೊಳಿಸುತ್ತೇವೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರುತ್ತೇವೆ ವಾಗ್ದಾನ ಮಾಡಿದರು.

ಮಾಜಿ ಶಾಸಕ ಸುರೇಶಗೌಡರು ಮಾತನಾಡಿ, ಹೊನ್ನುಡಿಕೆ ರಸ್ತೆ, ನಾಗವಲ್ಲಿ- ಸಿ.ಎಸ್ .‌ಪುರ ರಸ್ತೆ, ನಾಗವಲ್ಲಿ,‌ಹೊನ್ನುಡಿಕೆ ಸೇರಿದಂತೆ ಎಲ್ಲಾ ಪಂಚಾಯತಿಗಳಿಗೆ ನೂರಾರು ಕೋಟಿ ಅನುದಾನದಲ್ಲಿ ಕುಡಿಯುವ ನೀರು ಕೊಟ್ಟಿದ್ದು ಯಡಿಯೂರಪ್ಪನವರು. ಅವರ ಕಾಲದಲ್ಲಿ 2500 ಕೋಟಿ ರೂಪಾಯಿ ಅನುದಾನವನ್ನು ಕ್ಷೇತ್ರಕ್ಕೆ ಕೊಟ್ಟರು ಎಂದು ಸ್ಮರಿಸಿದರು.

ಈ ಸಲ ನಮ್ಮದೇ ಸರ್ಕಾರ ಬರಲಿದೆ. ಅತಿ ಹೆಚ್ಚು ಅನುದಾ‌ನ ತಂದು ಅಭಿವೃದ್ಧಿ ಪಡಿಸುವೆ. ಹತ್ತು ವರ್ಷದ ಅವಧಿಯಲ್ಲಿ ನಾನೇದರೂ ತಪ್ಪು ಮಾಡಿದ್ರೆ ನಿಮ್ಮ ಕಾಲಿಗೆ ಬೀಳುತ್ತೇನೆ. ನನ್ನನ್ನು ಕ್ಷಮಿಸಿ. ಇಡೀ ಕ್ಷೇತ್ರವನ್ನು ದೇಶವೇ ತಿರುಗಿ ನೋಡುವಂತೆ ಅಭಿವೃದ್ಧಿಪಡಿಸುವೆ ಎಂದು ಭರವಸೆ ನೀಡಿದರು.

50,000 ಸಾವಿರಕ್ಕೂ ಅಧಿಕ ಜನರು ಸೇರಿದ್ದರು. ರಸ್ತೆಯ ಉದ್ದಗಲಕ್ಕೂ ಜನರು ಕಿಕ್ಕಿರಿದು ಸೇರಿದ್ದರು. ಜಾಗ ಸಾಲದೇ ಸಿಕ್ಕಸಿಕ್ಕ ಕಟ್ಟಡ, ಮರಗಳನ್ನು ಏರಿ ಯಡಿಯೂರಪ್ಪ ಅವರತ್ತ ಕೈ ಬೀಸಿದರು.

ಸುರೇಶಗೌಡರನ್ನು ಮೋಸದಿಂದ ಸೋಲಿಸಿದರು ಎಂದ ಯಡಿಯೂರಪ್ಪ ಮುಸ್ಲಿಂ ಹಿಂದೂ ಬಾಂಧವರು ಒಂದಾಗಿ ಅವರಿಗೆ ಈ ಸಲ ಮೋಸವಾಗದಂತೆ ತಡೆಯಿರಿ ಇಂಥ ಶಾಸಕರು ದೇಶಕ್ಕೆ ಮಾದರಿ ಎಂದು ಹೃದಯ ತುಂಬಿ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸದರಾದ ಜಿಎಸ್ ಬಸವರಾಜು, ಜಿಲ್ಲಾಧ್ಯಕ್ಷ ಹೆಬ್ಬಾ ಕ ರವಿಶಂಕರ್, ಮಾಜಿ ಸಂಸದರಾದ ಎಸ್ ಪಿ ಮುದ್ದಹನುಮೇಗೌಡ, ಹರಿಯಾಣ ಶಾಸಕರಾದ ರಾಮ್ ಕುಮಾರ್ ಕಶ್ಯಪ, ಶಿವಪ್ರಸಾದ್, ತಾಲೂಕು ಅಧ್ಯಕ್ಷ ಶಂಕ್ರಣ್ಣ, ಮುಖಂಡರಾದ ಸಿದ್ಧೇಗೌಡ, ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

4 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

4 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

5 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

5 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

6 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

6 hours ago