ತುಮಕೂರು

ಜೀತ ಪದ್ಧತಿ ನಿರ್ಮೂಲನೆಗೆ  ಎಲ್ಲರ ಸಹಕಾರ ಅಗತ್ಯ

ನಾಗಮಂಗಲ: ಸಂವಿಧಾನದ ಆಶಯದಂತೆ ಜೀತಪದ್ಧತಿ ನಿರ್ಮೂಲನೆಯಾಗಬೇಕು. ಸಾರ್ವಜನಿಕರು ಇಂತಹ ಅನಿಷ್ಟ  ಪದ್ಧತಿ ನಿರ್ಮೂಲನೆಗೆ ಒಗ್ಗಟ್ಟಾಗಿ ಪಣತೊಟ್ಟಾಗ ಜೀತ ಪದ್ಧತಿಯನ್ನು ಹೋಗಲಾಡಿಸಲು ಸಾಧ್ಯ ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರಾದ ದೀಪಕ್ ಪಾಟೀಲ್ ಹೇಳಿದರು.

ನಾಗಮಂಗಲದ ಅಂಬೇಡ್ಕರ್ ಭವನದಲ್ಲಿ ಆಯೋಜನೆ ಮಾಡಿದ್ದ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ ವಕೀಲರ ಸಂಘ, ಅಭಿ ಯೋಜನೆ ಇಲಾಖೆ ಇವರುಗಳ ಸಂಯುಕ್ತ ಆಶಯದಲ್ಲಿ ಏರ್ಪಡಿಸಿದ್ದ ಜೀತ ಪದ್ಧತಿ  ನಿರ್ಮೂಲನೆ ದಿನಾಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ ಜೀತದಾಳುಗಳನ್ನು ಜೀತ ಪದ್ಧತಿಯಿಂದ ಮುಕ್ತಗೊಳಿಸುವ ಮತ್ತು ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಗಳ ಪ್ರಾಮಾಣಿಕ ಪ್ರಯತ್ನ ಅಗತ್ಯವಿದೆ ಎಂದರು.

ಜೀತ ಪದ್ಧತಿಯಡಿ ಸಿಲುಕುವ ಜೀತದಾಳುಗಳು ಸ್ವಾತಂತ್ರ್ಯ ಕಳೆದುಕೊಳ್ಳುತ್ತಾರೆ. ಭೂಮಾಲೀಕರು ಸೇರಿದಂತೆ ಬೇರೆ  ಬೇರೆಯವರು ಜೀತದಾಳುಗಳಿಗೆ ಇಲ್ಲಸಲ್ಲದ ನೆಪವೊಡ್ಡಿ ಕಿರುಕುಳ ನೀಡುತ್ತಾರೆ. ಬದುಕಿದ್ದರೂ ಬದುಕಲಾರದಂತಹ ಸ್ಥಿತಿ ನಿರ್ಮಿಸುತ್ತಾರೆ. ಜೀತ ಪದ್ಧತಿಯನ್ನು ತೊಲಗಿಸುವುದಕ್ಕೆಶಿಕ್ಷಣ ಮುಖ್ಯವಾಗಿದೆ. ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಉಚಿತವಾಗಿ ದೊರೆಯುತ್ತಿದೆ. ಶಿಕ್ಷಣ ಪಡೆದು ನಾಡಿನ ಸುಶಿಕ್ಷಿತ  ಪ್ರಜೆಗಳಾಗಿ ದೇಶವನ್ನು ಕಟ್ಟಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿಯೊಬ್ಬ ಪ್ರಜ್ಞಾವಂತ ವ್ಯಕ್ತಿಯು ಕೂಡ  ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕು ಎಂದು ಹೇಳಿದರು.

ಜೀತ ಪದ್ಧತಿ ನಿರ್ಮೂಲನೆಗಾಗಿ ಜನಜಾಗೃತಿ ಮೂಡಿಸಬೇಕು. ಡಿ.ದೇವರಾಜ ಅರಸು ಅವರ ನೇತೃತ್ವದಲ್ಲಿ 1976ರ  ಜೀತ ಪದ್ಧತಿ ನಿರ್ಮೂಲನೆ ಕಾಯ್ದೆ ಅನುಷ್ಠಾನಗೊಳಿಸಿ 75 ವರ್ಷಗಳಾಗಿದ್ದರೂ ಕೆಲವು ಕಡೆ ಜೀತ ಪದ್ಧತಿ ಜೀವಂತವಾಗಿರುವುದು ವಿಷಾದದ ಸಂಗತಿಯಾಗಿದೆ ಎಂದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ರಮೇಶ್ ಗೌಡ ಮಾತನಾಡಿ ಜೀತ ಪದ್ಧತಿ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಬೆಳಕಿಗೆ ಬಂದಿದೆ. ಇದರ ಬಗ್ಗೆ ಜನಸಾಮಾನ್ಯರು ಎಚ್ಚೆತ್ತುಕೊಂಡು ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪಣತೊಡಬೇಕಿದೆ  ಎಂದು  ಹೇಳಿದರು.

ಇದೇ ಸಮಾರಂಭದಲ್ಲಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ಚಂದ್ರ ಮೌಳಿ, ತಾಲೂಕು ಸಹಾಯಕ  ನಿರ್ದೇಶಕರಾದ ರಾಜೇಶ್, ಸಮಾಜ ಕಲ್ಯಾಣ ಇಲಾಖೆ.ಸರ್ಕಾರಿ ಅಭಿಯೋಜಕರಾದ ಶ್ರೀದೇವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Ashika S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

27 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

43 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago