News Karnataka Kannada
Sunday, May 12 2024
ತುಮಕೂರು

ತುಮಕೂರು: 5,23,544 ಮಕ್ಕಳಿಗೆ ಜೆ.ಇ. ಲಸಿಕೆ ನೀಡುವ ಗುರಿ

Tumakuru: 5,23,544 children have been given J.E. Target to vaccinate
Photo Credit : By Author

ತುಮಕೂರು: ‘ಜೆ.ಇ. ಲಸಿಕಾ ಅಭಿಯಾನ-2022’ ಅಂಗವಾಗಿ ಜಿಲ್ಲೆಯಲ್ಲಿ 5,23,544 ಮಕ್ಕಳಿಗೆ ಜೆ.ಇ. ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೇಶವ ರಾಜ್ ಜಿ. ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ‘ಮೆದುಳು ಜ್ವರ ಲಸಿಕಾ ಅಭಿಯಾನ-2022’ ಕುರಿತು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದವರಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಮೆದುಳು ಜ್ವರ (ಜೆ.ಇ) ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಜೆ.ಇ ಜ್ವರವನ್ನು ತಡೆಗಟ್ಟುವ ಉದ್ದೇಶದಿಂದ ಡಿಸೆಂಬರ್ 5 ರಿಂದ ಮೂರು ವಾರಗಳ ಕಾಲ ಜಿಲ್ಲೆಯ ಎಲ್ಲಾ ಶಾಲೆಯ ಮಕ್ಕಳಿಗೆ, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ, ಅಂಗನವಾಡಿ ಮಕ್ಕಳು, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಇತರೆ ವಲಸೆ ಪ್ರದೇಶಗಳಲ್ಲಿನ ಮಕ್ಕಳು ಹಾಗೂ ಶಾಲೆಯಿಂದ ಹೊರಗುಳಿದ 1 ರಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಗುರುತಿಸಿ ಅವರಿಗೆ ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಮೆದುಳು ಜ್ವರ ಲಸಿಕೆ ನೀಡಲಾಗುತ್ತದೆ ಎಂದರು.

ಅರ್ಹ ಮಕ್ಕಳಿಗೆ ಜೆ.ಇ. ಲಸಿಕೆ ನೀಡುವ ಮೂಲಕ ಮಕ್ಕಳನ್ನು ಮೆದುಳು ಜ್ವರದಿಂದ ರಕ್ಷಿಸುವುದು ಎಲ್ಲರ ಜವಬ್ದಾರಿಯಾಗಿದೆ, ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಿ ಮೆದುಳು ಜ್ವರ (ಜೆ.ಇ) ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಮೆದುಳು ಜ್ವರ ಕಾಯಿಲೆಗೆ ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಮುಖ್ಯ ಕಾರಣವಾಗಿದ್ದು, ಈ ವೈರಾಣು ಕ್ಯೂಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ.

ಪ್ರಪಂಚದಾದ್ಯAತ 24 ರಾಷ್ಟçಗಳಲ್ಲಿ ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಎಂಡೆಮಿಕ್ ಎಂದು ಗುರುತಿಸಲ್ಪಟ್ಟಿದೆ. ಇವುಗಳಲ್ಲಿ ಭಾರತ ಸೇರಿದಂತೆ 11 ಏಷ್ಯಾ ರಾಷ್ಟçಗಳು ಸೇರಿದ್ದು, ಪ್ರತಿ ವರ್ಷ 68000 ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲಿ ಮರಣ ಪ್ರಮಾಣ ಶೇ 20 ರಿಂದ ಶೇ30 ರಷ್ಟಿದ್ದು, ಗುಣಹೊಂದಿದವರಲ್ಲಿ ಶೇ 30 ರಿಂದ ಶೇ 50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ ಬುದ್ದಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗುತ್ತದೆ. ಜೆಇ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯು ಜ್ವರ ಪೀಡಿತನಾಗಿದ್ದು, ಮಾನಸಿಕ ಸ್ಥಿತಿಯಲ್ಲಿ ಬದಲಾವಣೆಹೊಂದಿದ್ದು, ಅಪಸ್ಮಾರವು ಉಂಟಾಗಬಹುದು. ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಮಾರಕ ಕಾಯಿಲೆಯನ್ನು ತಡೆಗಟ್ಟಲು ಜೆಇ ಲಸಿಕೆ ಅತ್ಯಂತ ಪರಿಣಾಮಕಾರಿ ಅಸ್ತçವಾಗಿದೆ. ಈಗಾಗಲೆ ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಈ 10 ಎಂಡಮಿಕ್ ಜಿಲ್ಲೆಗಳಲ್ಲಿ ಜೆಇ ಲಸಿಕೆಯನ್ನು ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೆ ಡೋಸ್ ಮತ್ತು 1 1/2 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಜೆಇ ಲಸಿಕೆ ಚುಚ್ಚುಮದ್ದು ನೀಡಲಾಗುತ್ತಿದೆ ಎಂದರು.

5ನೇ ಡಿಸೆಂಬರ್ 2022 ರಿಂದ ಚಾಲನೆಗೊಳ್ಳುವ ಈ ಅಭಿಯಾನದ ಮೊದಲನೇ ವಾರದಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಲಸಿಕಾ ಕೇಂದ್ರಗಳನ್ನು ಆಯೋಜಸಿ ಲಸಿಕೆಯನ್ನು ನೀಡಲಾಗುವುದು. ನಂತರದ ಎರಡು ವಾರಗಳಲ್ಲಿ ಅಂಗನವಾಡಿ ಕೇಂದ್ರಗಳು ಹಾಗೂ ಇನ್ನಿತರೆ ಸಮುದಾಯ ಪ್ರದೇಶಗಳಲ್ಲಿ ಲಸಿಕಾರಣ ನಡೆಸಲಾಗುವುದು ಎಂದರು.

ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು