ತುಮಕೂರು: ತಾಲೂಕಿನ ನಾಗಲಮಡಿಕೆ ಹೋಬಳಿಯ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್.ಅಚ್ಚಮ್ಮನಹಳ್ಳಿ ಗ್ರಾಮದ ಬಳಿ ಬೆಳೆದಿದ್ದ ಸುಮಾರು 61 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗ್ರಾಮದ ನಿವಾಸಿ ಸಿದ್ದಪ್ಪ (67) ಬಂಧಿತ ಆರೋಪಿ.
ಸೋಲಾರ್ ಪ್ಲಾಂಟ್ ಬ್ಲಾಕ್ ೩೪ ರ ಪಕ್ಕದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿದೆ ಎಂಬ ಮಾಹಿತಿಯ ಆಧಾರದ ಮೇಲೆ ಸರ್ಕಲ್ ಇನ್ಸ್ಪೆಕ್ಟರ್ ಕಾಂತ ರೆಡ್ಡಿ ನೇತೃತ್ವದ ಪೊಲೀಸ್ ತಂಡವು ದಾಳಿ ನಡೆಸಿತು.
ನವೆಂಬರ್ ೫ರ ಶನಿವಾರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.