News Karnataka Kannada
Saturday, April 13 2024
Cricket
ತುಮಕೂರು

ತುಮಕೂರು: ಜೂ.26 ರಂದು ‘ಮಾಧ್ಯಮ ಭಾಷಾ ದೀಪಿಕೆ’ ಕುರಿತು ಸಂವಾದ

An interaction on 'Media Bhasha Deepike' on June 26
Photo Credit : News Kannada

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗಗಳ ಆಶ್ರಯದಲ್ಲಿ ಜೂ.26ರಂದು ಬೆಳಗ್ಗೆ ೧೦ ಗಂಟೆಗೆ ಹಿರಿಯ ಪತ್ರಕರ್ತ ಡಾ. ಪದ್ಮರಾಜ ದಂಡಾವತಿಯವರ ಪುಸ್ತಕ ‘ಮಾಧ್ಯಮ ಭಾಷಾ ದೀಪಿಕೆ’ ಕುರಿತು ಸಂವಾದ ಆಯೋಜಿಸಲಾಗಿದೆ.

ಡಾ. ಪದ್ಮರಾಜ ದಂಡಾವತಿ ಅವರು ‘ಮಾಧ್ಯಮ ಮತ್ತು ಭಾಷೆ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತೆ ಆರ್. ಪೂರ್ಣಿಮಾ, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಡಿ. ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷೆ ಡಾ. ಅಣ್ಣಮ್ಮ, ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದ ಪ್ರಾಧ್ಯಾಪಕ ಡಾ. ಹೆಚ್. ಕೆ. ಶಿವಲಿಂಗಸ್ವಾಮಿ, ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು