News Karnataka Kannada
Tuesday, April 23 2024
Cricket
ತುಮಕೂರು

ತುಮಕೂರು: ಕ್ರೀಡಾಪಟುಗಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Tumakuru: Applications invited for sportspersons' scholarships
Photo Credit : Freepik

ತುಮಕೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ 10,೦೦೦/- ರೂ.ನಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ಏಪ್ರಿಲ್ 1, 2022 ರಿಂದ ಮಾರ್ಚ್ 31, 2023 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ಏಪ್ರಿಲ್ 1, 2022 ರಿಂದ ಮಾರ್ಚ್ 31, 2023ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಜಾಲತಾಣ https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜುಲೈ 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು