Categories: ತುಮಕೂರು

ತುಮಕೂರು: ಇಂಗ್ಲಿಷ್ ಭಾಷೆ ಕಲಿಕೆ, ಬಳಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆರಗ ಜ್ಞಾನೇಂದ್ರ

ತುಮಕೂರು: ಬ್ರಿಟಿಷರು ಬಿಟ್ಟು ಹೋಗಿರುವ ಇಂಗ್ಲಿಷ್ ಭಾಷೆಗೆ ದಾಸರಾಗಿದ್ದೇವೆ. ಸ್ವಾಭಿಮಾನ ಬಿಟ್ಟು ಕಲಿಯುತ್ತಿದ್ದೇವೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದರು.

ಮಂಗಳವಾರ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದ ನಂತರ ಮಾತನಾಡಿದರು. ವ್ಯಾಪಾರದ ಸಲುವಾಗಿ ದೇಶಕ್ಕೆ ಬಂದು ನಮ್ಮನ್ನು ಆಳಿದ್ದಾರೆ, ನಮ್ಮ ಸಂಸ್ಕೃತಿ ನಾಶ ಮಾಡಿದ್ದಾರೆ. ದೇಶವನ್ನೇ ಕೊಳ್ಳೆ ಹೊಡೆದಿದ್ದಾರೆ. ಕೊನೆಗೆ ಭಾಷೆ ಹೇರಿ ಹೋಗಿದ್ದಾರೆ. ಇಂಗ್ಲಿಷ್ ಕಲಿಯುವುದೇ ಅದ್ಭುತ ಎಂದು ಭಾವಿಸಿದ್ದೇವೆ ಎನ್ನುವ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕಿದರು.

‘ನಾನು ಸಚಿವನಾದ ನಂತರ ಗೃಹ ಇಲಾಖೆ ಆದೇಶಗಳನ್ನು ಕನ್ನಡದಲ್ಲೇ ನೀಡುತ್ತಿದ್ದೇನೆ. ಇದೇ ಮೊದಲ ಬಾರಿಗೆ ಪೊಲೀಸ್ ಕವಾಯಿತು ಹಾಗೂ ಇತರ ಸಂದರ್ಭಗಳಲ್ಲಿ ಕನ್ನಡದಲ್ಲೇ ನಿರ್ದೇಶನ ನೀಡುವಂತೆ ಆದೇಶಿಸಲಾಗಿದೆ ಎಂದು ಹೇಳಿದರು.

Gayathri SG

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

12 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

27 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

49 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago