Categories: ತುಮಕೂರು

ತುಮಕೂರು: ಕುಡಿಯುವ ನೀರಿಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದ ಡಾ.ಜಿ.ಪರಮೇಶ್ವರ್‌

ತುಮಕೂರು: ಕುಡಿಯುವ ನೀರಿನ ವಿಚಾರದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು. ಇನ್ನು ಬೆಸ್ಕಾಂ ಇಲಾಖೆ ಕೊರಟಗೆರೆಯಲ್ಲಿ ಮಾತ್ರ ಏಕೆ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶ್ನಿಸಿದ ಅವರು, ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಬಡವರ ಆರೋಗ್ಯಕ್ಕೆ ತೊಂದರೆಯಾದರೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.

ಸೋಮವಾರ ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಬೂತ್ ಕಮಿಟಿ ಸದಸ್ಯರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರಿಂದ ಸಂಗ್ರಹಿಸಿದ ಕುಡಿಯುವ ನೀರಿನ ಹಣ ಎಲ್ಲಿ ಹೋಯಿತು’ ಎಂದು ಆರೋಪಿಸಿದರು. ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ. ಗುತ್ತಿಗೆದಾರರು ವಸೂಲಿ ಮಾಡಿರುವ ಹಣದ ಬಗ್ಗೆ ಸರಕಾರ ತನಿಖೆ ನಡೆಸಲಿ ಎಂದು ಪ್ರತಿಪಾದಿಸಿದರು.

ಬೆಸ್ಕಾಂ ಇಲಾಖೆ ಕೂಡಲೇ ನೀರಿನ ಘಟಕಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಲೋಕಸಭೆಯ ಬೆನ್ನಲ್ಲೇ ಬಿಜೆಪಿಯ ಕೇಂದ್ರ ಸರ್ಕಾರದ ಸಚಿವರು ಮೀಸಲಾತಿ ಹೆಚ್ಚಳ ತಿರಸ್ಕರಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವು ಮೀಸಲಾತಿಯನ್ನು ಸಾಂವಿಧಾನಿಕವಾಗಿ ಮಾಡದೆ ರಾಜಕೀಯ ಪ್ರೇರಿತವಾಗಿ ಮಾಡಿಲ್ಲ ಎಂದು ಅವರು ಹೇಳಿದರು.

Sneha Gowda

Recent Posts

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

19 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

49 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago