ತುಮಕೂರು : ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನಪ್ಪಿರುವ ದಾರಣ ಘಟನೆ ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.
ಮನೆ ಮೇಲೆ ಆಟವಾಡುತ್ತಿದ್ದ ಇಬ್ಬರು ಬಾಲಕರು ಮನೆಗೆ ಹೊಂದಿಕೊಂಡಂತೆ ಇದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಯತೀಶ್ (14)ಹಾಗೂ ಪ್ರಜ್ವಲ್(14) ಮೃತಪಟ್ಟಿದ್ದಾರೆ.
ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.