ತುಮಕೂರು: ಕೊರಟಗೆರೆ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದ ಎತ್ತಿನಹೊಳೆ ಯೋಜನೆಯ ವ್ಯವಸ್ಥಾಪಕ ಅವಿನಾಶ್ ಅವರ ಮನೆಯಲ್ಲಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬಂಧಿಸುವಲ್ಲಿ ಕೊರಟಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಗೌರಿಬಿದನೂರು ಟೌನ್ ನಿವಾಸಿ ಭರತ್ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಪಟ್ಟಣದ ಹೊರವಲಯದಲ್ಲಿ ಬಾಡಿಗೆ ಕಾರಿನಲ್ಲಿ ಕುಳಿತು 1000 ರೂ. ಆರೋಪಿಯಿಂದ 1 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವೆಂಕಟೇಶ ನಾಯ್ಡು ಡೆಪ್ಯುಟಿ ಎಸ್ಪಿ ಮಧುಗಿರಿ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಕೆ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಸನ್ಮಾನಿಸಿದರು.