News Karnataka Kannada
Sunday, April 28 2024
ತುಮಕೂರು

ತುಮಕೂರು: ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಕೆ

Tumakuru: Congress candidate G. Parameshwara files nomination
Photo Credit : News Kannada

ತುಮಕೂರು: ರಾಜ್ಯದ ಜನರ ಗಮನ ಸೆಳೆದಿರುವ ಕ್ಷೇತ್ರಗಳಲ್ಲಿ ಒಂದಾದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅವರು ಮೇ ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸುವ ಪ್ರಯುಕ್ತ ಬೆಳಿಗ್ಗೆ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಬಳಿಕ ಕೊರಟಗೆರೆಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಮತ್ತು ಕಟ್ಟೆ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ದೇವಾಲಯಗಳ ಭೇಟಿ, ವಿಶೇಷ ಪೂಜೆ ನಂತರ ಕೊರಟಗೆರೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿವರೆಗೆ ಅಪಾರ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ತೆರಳಿದ ಡಾ. ಜಿ. ಪರಮೇಶ್ವರ್ ಅವರು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ನಂದಿನಿ ಪೇಡಾದ ಪ್ಯಾಕೆಟ್ ಹಾರ ಹಾಕುವ ಮೂಲಕ ರಾಜ್ಯದಲ್ಲಿ ನಂದಿನಿ ಉಳಿಸಿ ಎಂಬ ಸಂದೇಶವನ್ನು ನೀಡಿದ್ದು ವಿಶೇಷವಾಗಿತ್ತು.

ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಾಮಪತ್ರ ಸಲ್ಲಿಕೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ, ಎ.ಡಿ. ಬಲರಾಮಯ್ಯ, ಕೆಪಿಸಿಸಿ ಸದಸ್ಯ ಪ್ರಸನ್ನಕುಮಾರ್, ತುಮಕೂರು ನಗರ ಅಭ್ಯರ್ಥಿ ಇಕ್ಬಾಲ್ ಅಹಮದ್, ರಾಯಸಂದ್ರ ರವಿಕುಮಾರ್ ಮತ್ತಿತರರು ಸಾಥ್ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು