ತುಮಕೂರು

ತುಮಕೂರು: ಮಾಜಿ ಶಾಸಕ ರಫೀಕ್ ಅಹಮದ್ ಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ

ತುಮಕೂರು: 2023ರ ಸಾರ್ವತ್ರಿಕ ಚುನಾವಣೆ ಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು ಇದುವರೆಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡದಿರುವುದು ನಿಜಕ್ಕೂ ಬೇಸರ ತರಿಸಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ಕಾಂಗ್ರೆಸ್ ಮುಖಂಡರ ವಿರುದ್ಧ ಅಸಮದಾನ ಹೊರಹಾಕಿದ್ದಾರೆ.

ಇನ್ನು ಮಾಜಿ ಶಾಸಕ ರಫೀಕ್ ಅಹಮದ್ ರವರ ನಿವಾಸದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಮಾತನಾಡಿರುವ ಅವರು ಇದುವರೆಗೂ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರ ಕ್ಕ್ ಅಭ್ಯರ್ಥಿ ಘೋಷಣೆ ಮಾಡದಿರುವುದು ನಿಜಕ್ಕೂ ಮತದಾರರಿಗೆ ಮಾಡಿರುವ ಅವಮಾನ ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಎರಡನೇ ಪಟ್ಟಿಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಬೇಕು ಎಂದು ತಿಳಿಸಿರುವ ಅವರು.

ಇನ್ನು ತುಮಕೂರು ಜಿಲ್ಲೆಗೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ಬಹುಮುಖ್ಯ ಕ್ಷೇತ್ರವಾಗಿದ್ದು ತುಮಕೂರು ನಗರ ಎಪ್ಪತ್ತು ಸಾವಿರದಷ್ಟು ಬೃಹತ್ ಅಲ್ಪಸಂಖ್ಯಾತರ ಮತಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು ಜಿಲ್ಲೆಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು ಈ ಬಾರಿ ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ತಿಳಿಸಿದ್ದಾರೆ.

ಮಾಜಿ ಶಾಸಕ ರಫೀಕ್ ಅಹಮದ್ ರವರು ತುಮಕೂರು ನಗರ ವಿಧಾನಸಭಾ ಕ್ಷೇತ್ರದ 35 ವಾರ್ಡ್ನಲ್ಲಿ ತಮ್ಮ ಹಿಡಿತ ಹಾಗೂ ಉತ್ತಮ ಒಡನಾಟ ಹೊಂದಿರುವ ಅಭ್ಯರ್ಥಿಯಾಗಿದ್ದು ಅವರಿಗೆ ಟಿಕೆಟ್ ಘೋಷಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಪಾಲಿಕೆ ಸದಸ್ಯ ನಯಾಜ್ ಅಹಮದ್ ಮಾತನಾಡಿ ಮಾಜಿ ಶಾಸಕ ರಫೀಕ್ ಅಹಮದ್ ಹಾಗೂ ಶಫಿ ಅಹಮದ್ ರವರ ನೇತೃತ್ವದಲ್ಲಿ ಪಾಲಿಕೆಯ ಚುನಾವಣೆಯನ್ನು ಎದುರಿಸಿ ಹಲವು ಸದಸ್ಯರು ಪಾಲಿಕೆಯ ಗದ್ದುಗೆಯನ್ನು ಏರಲು ಕಾರಣರಾಗಿದ್ದಾರೆ ಹಾಗಾಗಿ ಈ ಬಾರಿಯ ಟಿಕೆಟ್ ರಫಿಕ್ ರವರಿಗೆ ನೀಡಿ ಎಂದು ಒತ್ತಾಯಿಸಿದರು.

ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕ ಜೆ.ಕುಮಾರ್ ಮಾತನಾಡಿ ಈ ಬಾರಿ ತುಮಕೂರು ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಉತ್ತಮ ವಾತಾವರಣ ನಿರ್ಮಾಣವಾಗಿದೆ ಹಾಗಾಗಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಶ್ರೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜು, ಮೆಹಬೂಬ್ ಪಾಷಾ, ರಾಜಣ್ಣ ,ಧನಲಕ್ಷ್ಮಿ, ಶಿವಣ್ಣ, ಶ್ರೀನಿವಾಸ್, ಅನಿಲ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

12 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

30 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

51 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago