Categories: ತುಮಕೂರು

ತುಮಕೂರು: ಅರಣ್ಯ ಮತ್ತು ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ – ಜಿಲ್ಲಾಧಿಕಾರಿ

ತುಮಕೂರು: ಮುಂದಿನ ಪೀಳಿಗೆಗೆ ಫೋಟೋದಲ್ಲಿ ಮಾತ್ರ ಹುಲಿ, ಸಿಂಹ, ಚಿರತೆಯನ್ನು ತೋರಿಸುವ ಪರಿಸ್ಥಿತಿಯನ್ನು ನಾವುಗಳು ತರಬಾರದು. ಆದುದರಿಂದ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ಅರಣ್ಯ ಮತ್ತು ಪ್ರಾಣಿಗಳ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಚಿರತೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಮಾನವ ಹಾಗೂ ಕಾಡುಪ್ರಾಣಿಗಳ ನಡುವೆ ಅಷ್ಟೇನು ಸಂಘರ್ಷವಿರಲಿಲ್ಲ. ಕಾಡು ಪ್ರಾಣಿಗಳ ವಾಸಸ್ಥಾನಕ್ಕೆ ಸಾಕಷ್ಟು ಸ್ಥಳಾವಕಾಶವಿತ್ತು. ಈ ಹಿಂದೆ ಮನುಷ್ಯರು ವಾಸಿಸುವ ಸ್ಥಾನಕ್ಕೆ ಅಪರೂಪಕ್ಕೆ ಕಾಡು ಪ್ರಾಣಿಗಳು ಲಗ್ಗೆ ಇಡುತ್ತಿದ್ದವು. ಆದರೆ ಈಗ ಕಾಡು ಪ್ರಾಣಿಗಳು ವಾಸಿಸುವ ಜಾಗಗಳ ಬಳಿ ಮಾನವ ಲಗ್ಗೆ ಇಡುತ್ತಿರುವ ಕಾರಣ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಪ್ರಕರಣಗಳು ಹೆಚ್ಚುತ್ತಿವೆ ಎಂದರು.

ಅಂತರಾಷ್ಟ್ರೀಯ ಚಿರತೆ ದಿನದ ಉದ್ದೇಶ ಚಿರತೆ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಜಾಗೃತಿ ನೀಡುವುದು ಆಗಿದೆ. ಎರಡನೆಯದಾಗಿ ಮಾನವ ಮತ್ತು ಪ್ರಾಣಿಗಳ ಸಂಘರ್ಷವನ್ನು ಕಡಿಮೆಗೊಳಿಸುವುದು ಹೇಗೆ ಎಂಬುವುದರ ಬಗ್ಗೆ ಬೆಳಕು ಚೆಲ್ಲುವುದು ಹಾಗೂ ಅರಣ್ಯವನ್ನು ಯಾವ ರೀತಿ ರಕ್ಷಣೆ ಮಾಡಬಹುದಾಗಿದೆ ಎಂಬುದರ ಕುರಿತು ಈ ದಿನಾಚರಣೆ ಬೆಳಕು ಚೆಲ್ಲಲಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಅರಣ್ಯ ಮತ್ತು ಪ್ರಾಣಿಗಳ ಕುರಿತು ಹೆಚ್ಚಿನ ಆಸಕ್ತಿವಹಿಸುತ್ತಿರುವುದು ಸಂತಸದ ವಿಷಯ. ಅರಣ್ಯ ಹಾಗೂ ಪ್ರಾಣಿಗಳ ರಕ್ಷಣೆ ಕುರಿತು ಮಕ್ಕಳಲ್ಲಿನ ಆಸಕ್ತಿ ಹೆಚ್ಚಾಗಬೇಕು ಎಂದರು.

ಅರಣ್ಯ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳುವವರು ಪರಿಸರವನ್ನು ಕಾಪಾಡುವ ಹೊಣೆಯನ್ನು ಹೊರಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ತ್ಯಾಜ್ಯವನ್ನು ಅರಣ್ಯ ಪ್ರದೇಶದಲ್ಲಿ ಸೃಷ್ಟಿಸಬಾರದು. ಇದೊಂದು ಗಂಭೀರ ವಿಷಯವಾಗಿದೆ. ಇದನ್ನು ಅರಿತು ನಾವೆಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ.

Ashika S

Recent Posts

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

17 mins ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

24 mins ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

36 mins ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

37 mins ago

ಚಾಮರಾಜನಗರ: ಸಿಡಿಲು ಬಡಿದು ಮೂರು ಜಾನುವಾರುಗಳು ಸಾವು

ಸಿಡಿಲು ಬಡಿದು ಮೂರು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಚೆನ್ನೂರು ಗ್ರಾಮದಲ್ಲಿ ನಡೆದಿದೆ.

59 mins ago

ರಾಯ್‌ಬರೇರಿಯಲ್ಲಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ; ಕಿಶೋರಿ ಶರ್ಮಾ ಪಾಲಾದ ಅಮೇಥಿ

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರು ಕಾಂಗ್ರೆಸ್‌ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕಡೆಗೂ ತೆರೆ ಬಿದ್ದಿದ್ದು, ರಾಹುಲ್‌ ಗಾಂಧಿ ತಮ್ಮ…

1 hour ago