News Karnataka Kannada
Thursday, May 02 2024
ತುಮಕೂರು

ತುಮಕೂರು: ಜಿಲ್ಲಾಧಿಕಾರಿಗಳಿಂದ ಸೆಲ್ಫೀ ಫೋಟೋ ಅಭಿಯಾನ ಚಾಲನೆ

Tumakuru: Deputy Commissioner launches selfie photo campaign
Photo Credit : News Kannada

ತುಮಕೂರು: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ಮಹತ್ವದ ಬಗ್ಗೆ ಮತದಾರರಿಗೆ ಜಾಗೃತಿಯನ್ನುಂಟು ಮಾಡಲು ಜಿಲ್ಲೆಯ ಸ್ವೀಪ್ ತಂಡವು ನಗರದ ಎಂಪ್ರೆಸ್ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿಂದು ಹಮ್ಮಿಕೊಂಡಿದ್ದ ಸೆಲ್ಫೀ ಫೋಟೋ ಅಭಿಯಾನ ಹಾಗೂ ಮತದಾರರ ಸಹಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದಿಂದ ಯಾರೂ ತಪ್ಪಿಸಿಕೊಳ್ಳಬಾರದು.  ಸುಭದ್ರ ಪ್ರಜಾಪ್ರಭುತ್ವಕ್ಕೆ ಮತದಾನ  ಅವಶ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 132-ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್, ಸಹಾಯಕ ಚುನಾವಣಾಧಿಕಾರಿ ಹಾಗೂ ಉಪ ಆಯುಕ್ತೆ ಸುಮತಿ, ನಗರ ಸ್ವೀಪ್‌ ನೋಡಲ್ ಅಧಿಕಾರಿ ಹಾಗೂ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು