Categories: ತುಮಕೂರು

ತುಮಕೂರು: ಮತ ಬಹಿಷ್ಕಾರ ಸ್ಥಳಕ್ಕೆ ಮಾಜಿ ಡಿ.ಸಿ ಎಂ ಪರಮೇಶ್ವರ್ ಭೇಟಿ

ತುಮಕೂರು: ತುಮಕೂರು ತಾಲೂಕಿನ ಕೋರ‌ಹೋಬಳಿಯ ಹಾಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಅಹೋಬಲ ಅಗ್ರಹಾರ ಗ್ರಾಮದಲ್ಲಿ ಮತ ಬಹಿಷ್ಕಾರದ ಎಚ್ಚರಿಕೆ ನೀಡಿದ್ದ ಪ್ರತಿಭಟನ ಸ್ಥಳಕ್ಕೆ ಮಾಜಿ‌ ಡಿಸಿ ಎಂ ಡಾ.ಜಿ ಪರಮೇಶ್ವರ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನೆಡೆಸಿದ್ದರು.

ತುಮಕೂರು ಗ್ರಾಮಾಂತರದ ಕೋರ ಹೋಬಳಿಯು ಕೊರಟಗೆರೆ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಭಾಗದಲ್ಲಿ ಮರಳು ಮಾಫೀಯಾ,ಬಲಾಡ್ಯರಿಂದ ಅತಿಯಾದ ಗಣಿಗಾರಿಕೆ ನೆಡೆಯುತ್ತಿದೆ. ಹೋಬಳಿಯ ಬೆಳಧರ ಗ್ರಾಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಹೋಬಲ ಅಗ್ರಹಾರ,ಚಿನಿವಾರನಹಳ್ಳಿ,ಜಕ್ಕೇನಹಳ್ಳಿ,ಮುದ್ಧುರಾಮಯ್ಯನ ಪಾಳ್ಯ ಸೇರಿದಂತೆ ಒಟ್ಟು 12 ಗ್ರಾಮಗಳ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಇಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸಾಕಷ್ಟು ಸಮಸ್ಯೆ ಎದುರಿಸಿದ ಗ್ರಾಮಸ್ಥರು ಗಣಿಗಾರಿಕೆ ನಿಲ್ಲಿಸದಿದ್ದರೆ ಮೇ. 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಮತ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು.

ಮತ ಬಹಿಷ್ಕಾರದ ಸುದ್ಧಿ Newskannada.com,News karnataka.com ವೆಬ್ ನಲ್ಲಿ‌ ಸುದ್ಧಿ ಮಾಡಲಾಗಿತ್ತು, ಕೊರಟಗೆರೆ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುವ ಹಾಗೂ ಮಾಜಿ ಡಿ.ಸಿ ಎಂ ಡಾ.ಜಿ ಪರಮೇಶ್ವರ್ ಅವರ ಕ್ಷೇತ್ರವಾಗಿರುವುದರಿಂದ ಎಚ್ಚೇತ್ತ ಡಾ.ಜಿ‌ಪರಮೇಶ್ವರ್ ಇಂದು(ಸೋಮವಾರ) ಸಂಜೆ ಭೇಟಿ ನೀಡಿ ಪ್ರತಿಭಟನಾ ಕಾರರೊಂದಿಗೆ ಚರ್ಚೆ ನಡೆಸಿದರು.

ಈ‌ ಸಂದರ್ಭದಲ್ಲಿ ಪ್ರತಿಭಟನಾ ಕಾರರೊಂದಿಗೆ ಮಾತನಾಡಿದ ಡಾ.ಜಿ‌ಪರಮೇಶ್ವರ್, ಪರಿಸರವನ್ನು‌ ಹಾಳು ಮಾಡುವ ಹಕ್ಕು ನಮಗಿಲ್ಲ. ಅಲ್ಲದೇ ನಾನು ಪರಿಸರ ಪೋಷಿಸುವವನು,ನಾನು ಪರಿಸರ ಹಾಳುಮಾಡುವವಷ್ಟು ಕೆಟ್ಟವನಲ್ಲ. ಈ ವಿಷಯ,ಇಲ್ಲಿ ಗಣಿಗಾರಿಕೆಯಿಂದ ಆಗುತ್ತಿರುವ ಸಮಸ್ಯೆ ನನಗೆ ಎರಡು ತಿಂಗಳ ಹಿಂದೆ ಗೊತ್ತಾಗಿದೆ. ನನಗೆ ನಾಲ್ಕು ವರ್ಷದ ಹಿಂದೆ ಗೊತ್ತಾಗಿದ್ದರೆ. ಗಣಿಗಾರಿಕೆಗೆ ಅವಕಾಶ ಕೊಡುತ್ತಿರಲಿಲ್ಲ ಎಂದರು.

ಎರಡು ತಿಂಗಳ ಹಿಂದೆ ಈ ವಿಷಯ ಗೊತ್ತಾಗಿದೆ. ಚುನಾವಣೆ ಇದೆ. ಚುನಾವಣೆ ಮುಗಿದ ಮೇಲೆ ಈ ವಿಷಯವಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Sneha Gowda

Recent Posts

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

11 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

30 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

32 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

47 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

1 hour ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago