Categories: ತುಮಕೂರು

ತುಮಕೂರು: ನಾಳೆ ನರೇಂದ್ರ ಮೋದಿ ಅವರಿಂದ ಚುನಾವಣಾ ಪ್ರಚಾರ

ತುಮಕೂರು: ಜಿಲ್ಲೆಯ ೧೧ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚನೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.೦೫ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ೧೨ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಅಂದು ಸಂಜೆ ೪.೩೦ಕ್ಕೆ ಆಗಮಿಸುವ ಪ್ರಧಾನಿ ಅವರು ೬ ಗಂಟೆಯವರೆಗೆ ತುಮಕೂರು ನಗರದಲ್ಲಿ ಇರಲಿದ್ದು, ಬಿಜೆಪಿ ಅಭ್ಯರ್ಥಿಗಳ ಮತಯಾಚನೆ ಮಾಡಲಿದ್ದು, ಮಧ್ಯಾಹ್ನ ೨ ಗಂಟೆಯಿಂದಲೇ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಮೋದಿ ಅವರು ಆಗಮಿಸುವ ೨ ಗಂಟೆ ಮೊದಲೇ ಕಾರ್ಯಕ್ರಮದ ಸ್ಥಳದಲ್ಲಿ ಹಾಜರಾಗಬೇಕು, ಸುರಕ್ಷತಾ ದೃಷ್ಠಿಯಿಂದ ಸಾರ್ವಜನಿಕರು ನೀರಿನ ಬಾಟಲಿ ಮತ್ತು ಬ್ಯಾಗ್ ತರದಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ೧೧ ಅಭ್ಯರ್ಥಿಗಳು ಹಾಗೂ ಸಂಸದರು ಭಾಗವಹಿಸಲಿದ್ದಾರೆ ಎಂದ ಅವರು ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಟಿ.ಆರ್.ಸದಾಶಿವಯ್ಯ, ಜಗದೀಶ್, ರುದ್ರೇಶ್, ಗಣೇಶ್ ಸೇರಿದಂತೆ ಇತರರಿದ್ದರು.

Ashika S

Recent Posts

ವೇಷ ಕಳಚುವ ವೇಳೆ ಹೃದಯಾಘಾತ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ…

5 mins ago

ಸೈಂಟ್ ಜೋಸೆಫ್ ವಿವಿಯಲ್ಲಿ ʼಟೆಕ್ಎಕ್ಸ್ 2.0ʼ  ರಾಷ್ಟ್ರೀಯ ಟೆಕ್ ಶೃಂಗಸಭೆ

ಸೈಂಟ್ ಜೋಸೆಫ್ ವಿವಿಯಲ್ಲಿ ಏಪ್ರಿಲ್ 29 ರಂದು  ಟೆಕ್ಎಕ್ಸ್ 2.0’  ನಡೆಯಿತು. ಈ ಕಾರ್ಯಕ್ರಮದಲ್ಲಿ ಐಟಿ ಉದ್ಯಮದ ನಾಲ್ಕು ಗಮನಾರ್ಹ…

12 mins ago

ಶಾಲಾ ಆವರಣದಲ್ಲೇ ದುಷ್ಕರ್ಮಿಗಳಿಂದ ವಿದ್ಯಾರ್ಥಿನಿಯ ಮುಖಕ್ಕೆ ಬ್ಲೇಡ್‌ನಿಂದ ಹಲ್ಲೆ

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು…

14 mins ago

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಸಮಾರಂಭ

ನಗರದ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿ 30 ಏಪ್ರಿಲ್   ರಂದು…

29 mins ago

ಜೆಕೆ ಹೊಸ ಸಿನಿಮಾ ‘ವೀರ್ʼ ಮೋಷನ್ ಪೋಸ್ಟರ್ ಬಿಡುಗಡೆ

ಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದು, ಅವರ ಹುಟ್ಟುಹಬ್ಬದ ವಿಶೇಷವಾಗಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

31 mins ago

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ…

40 mins ago