Categories: ತುಮಕೂರು

ತುಮಕೂರು: ಎವಿಇಎಸ್ ಮತದಾರರಿಗಾಗಿ ಇಂದಿನಿಂದ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪನೆ

ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಯಲ್ಲಿರುವ ಗೈರು ಮತದಾರ(ಎವಿಇಎಸ್-ಅಗತ್ಯ ಸೇವೆಯಲ್ಲಿ ಗೈರುಹಾಜರಿ ಮತದಾರರು)ರಿಗಾಗಿ ಅಂಚೆ ಮೂಲಕ ಮತದಾನ ಮಾಡಲು ಅನುವಾಗುವಂತೆ ಮೇ 2 ರಿಂದ ೪ರವರೆಗೆ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ) ಅನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಿರುವ ಬಗ್ಗೆ ಎಲ್ಲ ಎವಿಇಎಸ್ ಮತದಾರರಿಗೆ ಎಸ್.ಎಂ.ಎಸ್. ಮೂಲಕ ಕಡ್ಡಾಯವಾಗಿ ಮಾಹಿತಿ ನೀಡಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬೆಸೈಟ್‌ನಲ್ಲಿ ಪ್ರಚುರಪಡಿಸಬೇಕು ಎಂದರು.

ಎಲ್ಲ ಎವಿಇಎಸ್ ಮತದಾರರಿಗೆ ಪಿವಿಸಿ ಸ್ಥಾಪನೆಯ ಸ್ಥಳ, ವಿಳಾಸ, ದಿನಾಂಕ, ಸಮಯದ ಮಾಹಿತಿಯನ್ನು ಎಸ್.ಎಂ.ಎಸ್. ಮೂಲಕ ತಿಳಿಸಬೇಕು. ಪಿವಿ ಸೆಂಟರ್‌ನಲ್ಲಿ ಅಂಚೆ ಮತದಾನ ಮಾಡಲು ಮೇ ೨ ರಿಂದ ೪ರವರೆಗೆ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಅಂಚೆ ಮತದಾನಕ್ಕಾಗಿ ನಮೂನೆ- ೧೨ಡಿಯನ್ನು ಭರ್ತಿ ಮಾಡಿ ಸಲ್ಲಿಸಿದ ಎವಿಇಎಸ್ ಸಿಬ್ಬಂದಿಗಳು ಕೇವಲ ಈ ಪಿವಿಸಿ(ಅಂಚೆ ಮತದಾನ ಕೇಂದ್ರದಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶವಿರುತ್ತದೆ. ಉಳಿದಂತೆ ಬೇರೆ ಯಾವ ಕ್ರಮದಲ್ಲಿಯೂ ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂಬುದನ್ನು ಕಡ್ಡಾಯವಾಗಿ ತಿಳಿಸಬೇಕು ಎಂದು ತಿಳಿಸಿದರು.

ಪೋಸ್ಟಲ್ ವೋಟಿಂಗ್ ನಡೆಯುವ ದಿನಾಂಕವನ್ನು ಚುನಾವಣಾ ಅಭ್ಯರ್ಥಿಗಳಿಗೆ ಮಾಹಿತಿ ನೀಡಬೇಕು. ಅಂಚೆ ಮತದಾನ ನಡೆಯುವ ವಿಧಾನವನ್ನು ಅಭ್ಯರ್ಥಿ ಅಥವಾ ಅವರ ಏಜೆಂಟ್‌ಗಳಿಗೆ ವೀಕ್ಷಿಸಲು ಅವಕಾಶವಿರುತ್ತದೆ ಎಂದು ಹೇಳಿದರು. ಅಂಚೆ ಮತದಾನ ಕೇಂದ್ರದಲ್ಲಿ ಮತದಾರರಿಗೆ ಅಂಚೆ ಮತಪತ್ರ, ಮತದಾನಕ್ಕೆ ಸಂಬಂಧಿಸಿದಂತೆ ೧೩ಎ, ೧೩ಬಿ, ೧೩ಸಿ ಇತರೆ ಲಕೋಟೆಗಳನ್ನು ನೀಡಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ನಿಯೋಜಿತ ಸಿಬ್ಬಂದಿಗಳು ಮತದಾರನ ಗುರುತು ಪತ್ರ(ಚುನಾವಣಾ ಆಯೋಗ ಸೂಚಿಸಿರುವ ದಾಖಲೆಗಳ ಪೈಕಿ) ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪಟ್ಟಿಯನ್ನು ದೊಡ್ಡ ಕಾರ್ಡ್ ಬೋರ್ಡ್‌ನಲ್ಲಿ ಲಗತ್ತಿಸಿ ಮತದಾನ ಕೇಂದ್ರದ ಹೊರಗಡೆ ಇಡಬೇಕು.

ಪಿವಿಸಿ ಕೇಂದ್ರದಲ್ಲಿ ಎವಿಇಎಸ್ ಮತದಾರರ ಸಂಖ್ಯೆಗನುಗುಣವಾಗಿ  ಹೆಚ್ಚುವರಿ ಅಂಚೆ ಮತಪತ್ರಗಳು, ಅಗತ್ಯ ಲಕೋಟೆಗಳು, ನೇರಳೆ ಬಣ್ಣದ ಸ್ಕೆಚ್ ಪೆನ್, ಗೋಂದು ಬಾಟಲಿ, ಸೆಲ್ಫ್ ಇಂಕಿಂಗ್ ಪ್ಯಾಡ್, ಸ್ಟೀಲ್ ಟ್ರಂಕ್, ಅವಶ್ಯಕ ರಿಜಿಸ್ಟರ್, ವೋಟಿಂಗ್ ಕಂಪಾಟ್ಮೆಂಟ್, ಎವಿಇಎಸ್ ಮತದಾರರ ಪಟ್ಟಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಹೊಂದಿರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

8 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

8 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

9 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

9 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

10 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

10 hours ago