Categories: ತುಮಕೂರು

ತುಮಕೂರು: ಸಂಸದ ಬಸವರಾಜು ಮಗನ ವಿರುದ್ಧ ಸೊಗಡು ಶಿವಣ್ಣ ಆಕ್ರೋಶ

ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ಗಬ್ಬೆದ್ದು ನಾರುತ್ತಿದೆ. ಮಳೆ ನೀರು ಸರಾಗವಾಗಿ ಹರಿಯದೆ ಎಲ್ಲೆಂದರಲ್ಲಿ ನಿಂತು ಜನರು ಓಡಾಡಲು ತೊಂದರೆಯಾಗಿದೆ. ಇದಕ್ಕೆ ಅಪ್ಪ-ಮಗನೇ ಕಾರಣ ಎಂದು ಮಾಜಿ ಸಚಿವ ಹಾಗೂ ತುಮಕೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿ ಸರಿಯಾಗಿ ನಡೆದಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ಮಾಡಲಾಗಿದ್ದು, ಸಾಕಷ್ಟು ಅವ್ಯವಹಾರ ನಡೆದಿದೆ. ಈ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಸ್ಮಾರ್ಟ್ ಸಿಟಿಯಲ್ಲಿ 120 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಿಂಗ್ ರಸ್ತೆ ಕಳಪೆ ಗುಣಮಟ್ಟದಿಂದ ಕೂಡಿದ್ದು ಯಾರೂ ಕೇಳುವವರಿಲ್ಲದೆ ಆಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ತುಮಕೂರು ನಗರದ ಎಲ್ಲಾ ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ನೀರು ನಿಂತು ಗಬ್ಬು ನಾರುತ್ತಿದೆ ಎಂದು ಆರೋಪಿಸಿದರು.

ನಾನು ಸಿದ್ದಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರಸ್ವಾಮಿಗಳ ಆಶಯಗಳಂತೆ ನಡೆದುಕೊಂಡು ಬಂದಿದ್ದೇನೆ. ಭ್ರಷ್ಟಾಚಾರರಹಿತ, ಸ್ವಜನ ಪಕ್ಷಪಾತ ಮಾಡದೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.

ಚುನಾವಣಾ ಪ್ರಚಾರದ ಸಮಯದಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರು ನನ್ನನ್ನು ಅಧಿಕ ಸಂಖ್ಯೆಯ ಮತಗಳಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

Ashika S

Recent Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ : ಐವರು ಮೃತ್ಯು, 45 ಮಂದಿಗೆ ಗಾಯ

ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

7 mins ago

ಹಾಸನ ವಿಡಿಯೋ ಕೇಸ್ ಪ್ರಕರಣ: ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್

ಹಾಸನದ ವಿಡಿಯೋ ಕೇಸ್ ಬಗ್ಗೆ ಈಗಾಗಲೇ ತನಿಖೆ ಆಗುತ್ತಿದೆ. ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ‌. ಅದರ ಬಗ್ಗೆ ನಾವು ಮಾತನಾಡದೇ…

22 mins ago

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 19 ರೂ. ಇಳಿಕೆ

ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ 19 ರೂ. ಇಳಿಕೆ ಮಾಡಲಾಗಿದೆ.

50 mins ago

ಮುಸ್ಲಿಮರಿಗೆ ಮೀಸಲಾತಿ: ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದ ಮಾವಳ್ಳಿ ಶಂಕರ್‌

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌, ಬಿಜೆಪಿ ಅಪಪ್ರಚಾರ…

1 hour ago

ರಾಜ್ಯದಲ್ಲಿ 20 ಲಕ್ಷ ಜನರಿಗೆ ಉದ್ಯೋಗ ನೀಡುವಂತೆ ಭರವಸೆ ನೀಡಿದ ಎನ್‌ಡಿಎ ಗ್ಯಾರಂಟಿ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನು ತಮ್ಮ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ…

1 hour ago

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್

ಕೃಷಿ ಸ್ವಾವಲಂಬನೆ ಪ್ರತೀಕ ಕೃಷಿ ಮೂಲಕ ಜೀವನ ನಡೆಸಲು ಸೂಕ್ತ ಅವಕಾಶ ಇದೆ ಕೃಷಿ ಮನುಷ್ಯನ ಆರೋಗ್ಯ, ಆಯುಷ್ಯ, ಸಂಪತ್ತನ್ನು…

2 hours ago