News Karnataka Kannada
Tuesday, April 30 2024
ತುಮಕೂರು

ತುಮಕೂರು: ಬಿಜೆಪಿಗೆ ಸೊಗಡು ಶಿವಣ್ಣ ರಾಜೀನಾಮೆ

Sogadu Shivanna to bid adieu to BJP today
Photo Credit : News Kannada

ತುಮಕೂರು: ವಿಧಾನಸಭಾ ಚುನಾವಣೆಗೆ ತುಮಕೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿ ಮಾಜಿ ಸಚಿವ  ಸೊಗಡು ಎಸ್.ಶಿವಣ್ಣ ಮುಂಚೂಣಿಯಲ್ಲಿದ್ದರು, ಆದರೆ ಹಾಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು ಇದೀಗ ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ತುಮಕೂರಿನ ಖಾಸಗಿ ಹೋಟೆಲ್‌ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದೇನೆ. ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಇಮೇಲ್‌ ಮೂಲಕ ರಾಜೀನಾಮೆ ಸಂದೇಶ ಕಳುಹಿಸಿದ್ದೇನೆ ಎಂದು ವಿವರಿಸಿದರು. ಅಲ್ಲದೇ ಇಂದು ಬಿಜೆಪಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ ಎಂದು ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ. ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕೆ. ಇಲ್ಲವೇ ಯಾವುದಾದರೂ ಪಕ್ಷದಿಂದ ಸ್ಪರ್ಧೆ ಮಾಡಬೇಕೆ ಎಂಬ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು