News Karnataka Kannada
Sunday, April 28 2024
ತುಮಕೂರು

ತುಮಕೂರು: ಭಗೀರಥರು ಗಂಗೆಯನ್ನು ಭೂಮಿಗೆ ತಂದಂತಹ ಧೀಮಂತರು- ಕಸಾಪ ಅಧ್ಯಕ್ಷ

Tumakuru: Sri Bhagiratha was a great man who brought the Ganga to earth: Sahitya Parishat President
Photo Credit : News Kannada

ತುಮಕೂರು: ಶ್ರೀ ಭಗೀರಥರು ಸತತ ಪ್ರಯತ್ನದಿಂದ ಗಂಗೆಯನ್ನು ಭೂಮಿಗೆ ತಂದಂತಹ ಧೀಮಂತರು. ನಾವು ಇಂದಿಗೂ ಯಾವುದೇ ಒಂದು ಕೆಲಸವನ್ನು ಅಸಾಧಾರಣ ಸಾಧನೆಗಳನ್ನು ಭಗೀರಥ ಪ್ರಯತ್ನ ವೆಂದೇ ಉದಾಹರಿಸುವುದು ವಾಡಿಕೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಉಪ್ಪಾರ ಸಮಾಜದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿಂದು ಆಯೋಜಿಸಲಾಗಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಉಪ್ಪಾರ ಸಮಾಜದ ಬಂಧುಗಳು ಸಮಾಜದ ಏಳಿಗೆಗಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖೇನ, ಹಾಸ್ಟೆಲ್‌ಗಳನ್ನು ನಿರ್ಮಿಸುವ ಮುಖೇನ, ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವುದರ ಮುಖೇನ ಎಲ್ಲಾ ಬಂಧುಗಳನ್ನು ಸುಶಿಕ್ಷಿತರನ್ನಾಗಿ ರೂಪಿಸಬೇಕು. ಇಂತಹ ಕೆಲಸಗಳು ಸಾಧನೆಗಳು ರೂಪುಗೊಂಡಲ್ಲಿ ಜಯಂತಿ ಆಚರಣೆಗಳು ಸಾರ್ಥಕವಾಗುತ್ತದೆಂದು ತಿಳಿಸಿದರು.

ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಸಿ.ಎಸ್. ಮಂಜುನಾಥ್ ಮಾತನಾಡುತ್ತಾ, ಭಗೀರಥರು ಇಕ್ಷ್ವಾಕು ವಂಶದಲ್ಲಿ ರಾಜಕುಮಾರನಾಗಿ ಜನಿಸಿದರು. ತನ್ನ ಪೂರ್ವಜರ ಭೀಕರ ಅಂತ್ಯವನ್ನು ತಿಳಿದು ಅವರಿಗೆ ಸದ್ಗತಿ ಪ್ರಾಪ್ತಿಯಾಗಲೆಂದು ತನ್ನ ಕಠಿಣ ಶ್ರಮದಿಂದ ಗಂಗೆಯನ್ನು ಭೂಮಿಗೆ ಕರೆತಂದರು. ಇಂತಹ ಧೀಮಂತರ ಸಾಧನೆಗಳನ್ನು ಸಮಾಜಕ್ಕೆ ಮುಂದಿನ ಪೀಳಿಗೆಗೆ ತಿಳಿಸಲು ಈ ಜಯಂತಿಯನ್ನು ಆಚರಿಸುತ್ತಿರುವುದು ಅತ್ಯಂತ ಶ್ಲಾಘನೀಯವೆಂದು ತಿಳಿಸಿದರು.

ಜಿಲ್ಲಾ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಶ್ರೀನಿವಾಸ್ ಮಾತನಾಡುತ್ತಾ, ಸರ್ಕಾರವು ಭಗೀರಥರ ಸಾಧನೆಗಳನ್ನು ಸಮಾಜಕ್ಕೆ ಪುನರ್ ನೆನಪಿಸುವ ಉದ್ದೇಶದಿಂದ ಹಾಗೂ ಉಪ್ಪಾರ ಜನಾಂಗವು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡುವ ಸದುದ್ದೇಶದಿಂದ ಈ ಜಯಂತಿ ಕಾರ್ಯಕ್ರಮವನ್ನು ರೂಪಿಸಿರುತ್ತದೆ. ಸರ್ಕಾರದ ಆಶಯದಂತೆ ಜನಾಂಗದ ಎಲ್ಲಾ ಮಕ್ಕಳಿಗೆ ಶಿಕ್ಷಣವನ್ನು ನೀಡಿ   ಸತ್ ಪ್ರಜೆಗಳಾಗಿ ರೂಪಿಸಬೇಕೆಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ. ರವಿಕುಮಾರ್ ಅವರು ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ, ಸರ್ಕಾರದ ನಿರ್ದೇಶನದಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ   ಮನವರಿಕೆ ಮಾಡಿಕೊಟ್ಟರು. ಮೇಲ್ವಿಚಾರಕರಾದ ಡಿ.ವಿ. ಸುರೇಶ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೆ ಭಾರತೀಯ ಚುನಾವಣಾ ಆಯೋಗದ ಪ್ರತಿಜ್ಞಾವಿಧಿಯನ್ನು ಭೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ವೈದ್ಯಾಧಿಕಾರಿ ಡಾ. ನಾಗೇಶ್, ಉಪ್ಪಾರ ಜನಾಂಗದ ಮುಖಂಡರುಗಳಾದ ಆರ್. ರೇಣುಕಯ್ಯ, ಹೆಚ್. ಆರ್. ಸತೀಶ್, ಗಂಗಪ್ಪ, ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ವಕೀಲ ಎನ್. ಅನಿಲ್ ಕುಮಾರ್, ಹೆಚ್.ಕೆ. ಶಿವಣ್ಣ, ರಂಗನಾಥ್, ಲೋಕೇಶ್, ಧರ್ಮರಾಜು, ಲಿಂಗಣ್ಣ ಮತ್ತು ಮೂಡಲಗಿರಿ ಅವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿಗಳಾದ ಬಿ.ಆರ್. ರಾಜೇಗೌಡ, ಎನ್. ರಮೇಶ್, ಬಿ.ಕೆ. ರಾಜೇಶ್, ಆರ್. ಎನ್. ಮೇಘನಾ ಮತ್ತು ಎಸ್. ಎನ್. ದರ್ಶನ್ ಮೊದಲಾದವರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು