News Karnataka Kannada
Sunday, May 05 2024
ತುಮಕೂರು

ತುಮಕೂರು: ತಂಬಾಕು ಸೇವನೆ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ

Tum
Photo Credit : By Author

ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಸೇವನೆಯ ವಿರುದ್ದ ಜಿಲ್ಲೆಯಾದ್ಯಂತ ದಂಡ ವಿಧಿಸುವುದು ಹಾಗೂ ತಪಾಸಣೆ ತಂಡಗಳು ಭೇಟಿ ನೀಡುವುದನ್ನು ಹೆಚ್ಚಿಸÀಬೇಕು ಎಂದು ಜಿಲ್ಲಾಧಿಕಾರಿ ವ್ಯೆ.ಎಸ್ ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೆö್ಯಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನ ಉತ್ಪನ್ನ ಅಧಿನಿಯಮ(ಕೋಟ್ಪಾ) –2003 ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ನಿಷೇದವಿದ್ದು, ತಂಬಾಕು ಉತ್ಪನ್ನಗಳ ದುಷ್ಪಪರಿಣಾಮದ ಬಗ್ಗೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಜತೆಗೆ ನಿಯಮಿತ ದಾಳಿ ನಡೆಸಿ ವರದಿ ಸಲ್ಲಿಸಬೇಕು, ಪ್ರವಾಸಿ ಸ್ಥಳಗಳನ್ನು ತಂಬಾಕು ಮುಕ್ತವನ್ನಾಗಿಸಲು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಬೇಕು.

ತಂಬಾಕು ಸೇವನೆ ನಿಯಂತ್ರಣದಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ತಂಬಾಕು ನಿಯಂತ್ರಣ ಕೋಶದಿಂದ ನಿರಂತರವಾಗಿ ದಾಳಿ ನಡೆಸಿ ಸಾರ್ವಜನಿಕ ಪ್ರದೇಶ, ಶಾಲೆ ಆವರಣದ ಬಳಿಯೇ ಬೀಡಿ, ಸಿಗರೇಟು, ತಂಬಾಕು ಉತ್ಪನ್ನ ಮಾರಾಟದ ಮೇಲೆ ದಂಡ ವಿಧಿಸಬೇಕು, ಸಾರ್ವಜನಿಕ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ದಂಡ ವಿಧಿಸುವ ಕುರಿತು ಎಚ್ಚರಿಕೆಯ ಫಲಕವನ್ನು ಅಳವಡಿಸಬೇಕು, ತಂಬಾಕು ಮುಕ್ತ ನಗರವನ್ನಾಗಿಸಲು ವಿವಿಧ ಇಲಾಖೆಗಳ ಪರಸ್ಪರ ಸಂಪೂರ್ಣವಾದ ಸಹಕಾರದಿಂದ ಕಾರ್ಯನಿರ್ವಸಬೇಕು ಎಂದರು.

ತಂಬಾಕು ಸೇವನೆ ದುಷ್ಪರಿಣಾಮದ ಕುರಿತು ಪ್ರೌಢಶಾಲೆ ಮತ್ತು ಪಿಯುಸಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿಗಳಿಂದ ಜಾಥಾ, ವಿಚಾರ ಸಂಕಿರಣಗಳನ್ನು ಆಯೋಜಿಸಬೇಕು. ಶಾಲೆ– ಕಾಲೇಜುಗಳು ತಂಬಾಕು ಉತ್ಪನ್ನ ಮಾರಾಟ, ಸೇವನೆ ನಿಷೇಧಿತ ವಲಯಗಳಾಗಿದ್ದು, ಸುತ್ತಮುತ್ತ ತಂಬಾಕು ಉತ್ಪನ್ನಗಳ ಅನಧಿಕೃತ ಮಾರಾಟಕ್ಕೆ ಕಡಿವಾಣ ಹಾಕಿ, ಕಠಿಣ ಕ್ರಮ ಕ್ಯೆಗೊಂಡು ಜಿಲ್ಲೆಯ ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನಾಗಿಸಬೇಕು, ತಂಬಾಕು ನಿಯಂತ್ರಣ ಕೋಶದ ತಂಡದೊAದಿಗೆ ಆಗ್ಗಾಗ್ಗೆ ಶಾಲೆಗಳಿಗೆ ಭೇಟಿ ನೀಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ.ಮೋಹನ್ ದಾಸ್ ಮಾತನಾಡಿ, ತಂಬಾಕು ನಿಯಂತ್ರಣ ಕೋಶದಿಂದ ಜಿಲ್ಲೆಯಲ್ಲಿ ಏಪ್ರಿಲ್-2022ರಿಂದ ಸೆಪ್ಟಂಬರ್-2022ರವರೆಗೆ 618 ಪ್ರಕರಣಗಳನ್ನು ದಾಖಲಿಸಿ 58,060.00 ರೂಗಳ ದಂಡ ವಸೂಲಿ ಮಾಡಲಾಗಿದೆ. ಕಾಯ್ದೆಯ ಸೆಕ್ಷನ್ 6ಎ ಮತ್ತು ಬಿ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಹಾಗೂ ಸೆಕ್ಷನ್ 4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ನಿಯಂತ್ರಿಸಲು ಅಂಗಡಿಗಳ ಮುಂದೆ ಬೋರ್ಡ್ ಹಾಕದ ಮಾಲೀಕರಿಗೂ ಹಾಗೂ. ಶಾಲಾ ಕಾಲೇಜುಗಳ 100 ಯಾರ್ಡ್ ವ್ಯಾಪ್ತಿ ತಂಬಾಕು ಉತ್ಪನ್ನ ಮಾರುವ ಕುರಿತು ಕಡ್ಡಾಯವಾಗಿ ನಾಮಫಲಕ ಹಾಕಿಸದ ಮಾಲೀಕರಿಗೆ ದಂಡ ವಿಧಿಸಲಾಗುತ್ತಿದೆ, ತುಮಕೂರು ವಿಶ್ವವಿಧ್ಯಾಲಯವನ್ನು ತಂಬಾಕು ಮುಕ್ತ ಪ್ರದೇಶವಾಗಿ ಘೋಷಣೆ ಮಾಡಲಾಗಿದೆ ಎಂದರು.

ಸಭೆಯಲ್ಲಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿಧ್ಯಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೇಮ ಟಿ.ಎಲ್.ಎಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ರವಿಪ್ರಕಾಶ್, ಜಿಲ್ಲಾ ಸಾಮಾಜಿಕ ಕಾರ್ಯಕರ್ತ ಹರೀಶ್ ಕೆ.ಎಸ್, ಆಪ್ತ ಸಮಾಲೋಚಕರಾದ ರುಕ್ಮೀಣಿ, ಪ್ರವಾಸೋಧ್ಯಮ ಇಲಾಖೆಯ ಇಮ್ರಾನ್‌ವುಲ್ಲಾ ಖಾನ್, ಬಿ.ಐ ಪ್ರಾಜೆಕ್ಟ್ ನ ಜ್ಯೆಲ್ ಥಾಮಸ್, ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು