News Karnataka Kannada
Saturday, May 04 2024
ತುಮಕೂರು

ತುಮಕೂರು: ಖುಷಿಯಿಂದ ಶಾಲೆಗೆ ಮರಳಿದ ವಿದ್ಯಾರ್ಥಿಗಳು

Kerala: Schools, colleges to remain closed till September 24
Photo Credit : News Kannada

ತುಮಕೂರು: ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದರು.

ಬೇಸಿಗೆ ರಜೆ ಬಳಿಕ ಇಂದಿನಿಂದ ಆರಂಭವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಸ್ವಾಗತಿಸಲಾಯಿತು.

೨೦೨೩-೨೪ನೇ ಶೈಕ್ಷಣಿ ವರ್ಷದ ಮೊದಲ ದಿನವಾದ ಇಂದು ಶಾಲೆಗಳಲ್ಲಿ ಸಿಹಿಯೂಟ ಸಿದ್ದಪಡಿಸಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಬಡಿಸಲಾಯಿತು.

ಕಳೆದ ಒಂದೂವರೆ ತಿಂಗಳಿನಿಂದ ರಜೆಯ ಖುಷಿಯಲ್ಲಿದ್ದ ವಿದ್ಯಾರ್ಥಿಗಳು ಇಂದು ಶಾಲಾ ಸಮವಸ್ತ್ರದೊಂದಿಗೆ ಹೆಗಲಿಗೆ ಶಾಲಾ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಂಡು ಬಂತು.

ಕಳೆದ ಒಂದೂವರೆ ತಿಂಗಳಿನಿಂದ ರಜೆ ಇದ್ದ ಕಾರಣ ಶಾಲೆಗಳನ್ನು ಸ್ವಚ್ಛಗೊಳಿಸಿ ಬಾಳೆಕಂದು, ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಶಾಲೆಗಳು ಸರ್ವಾಲಂಕೃತಗೊಂಡಿರುವುದನ್ನು ಮಕ್ಕಳು ನೋಡಿ ಖುಷಿಯಿಂದಲೇ ಶಾಲಾ ಕೊಠಡಿಗಳಿಗೆ ತೆರಳಿದರು.

ಕೆಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಸಿಹಿ ಹಂಚಿ, ಗುಲಾಬಿ ಹೂ ನೀಡುವ ಮೂಲಕ ಶಾಲೆಗೆ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.
ನಗರದ ಅಗ್ರಹಾರ, ಮರಳೂರು ದಿಣ್ಣೆ, ಎಂ.ಜಿ. ರಸ್ತೆ. ಆರ್ಯಬಾಲಿಕಾ ಶಾಲೆ, ಮೆಳೇಕೋಟೆ, ಗಂಗಸಂದ್ರ ಸೇರಿದಂತೆ ಜಿಲ್ಲೆಯ ೧೦ ತಾಲ್ಲೂಕುಗಳಲ್ಲೂ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣದೊಂದಿಗೆ ಶಾಲೆಗಳನ್ನು ಪ್ರಾರಂಭಿಸಲಾಯಿತು.

ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಶಾಲೆಗಳನ್ನು ನಡೆಸುವ ಜತೆಗೆ ಯೋಗ್ಯವಲ್ಲದ ಕೊಠಡಿಗಳನ್ನು ತರಗತಿಗಳಿಗೆ ಬಳಸದೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಇಲಾಖೆಯ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಈಗಾಗಲೇ ಇಲಾಖೆಯಿಂದ ವಿತರಿಸಲಾಗಿರುವ ಉಚಿತ ಪಠ್ಯಪುಸ್ತಕ, ಸಮವಸ್ತ್ರವನ್ನು ಬಳಕೆ ಮಾಡಿಕೊಳ್ಳುವಂತೆಯೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪೋಷಕರಿಗೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು