Categories: ತುಮಕೂರು

ತುಮಕೂರು: ಕೇಂದ್ರ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿದೆ – ಈ. ಶಿವಣ್ಣ ಆರೋಪ

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಎಸ್.ಎಫ್.ಐ ಜಿಲ್ಲಾಧ್ಯಕ್ಷ ಹಾಗೂ ಯುವ ವಕೀಲ ಈ. ಶಿವಣ್ಣ ಆರೋಪಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಬೇಕಾದರೆ ದೇಶದಲ್ಲಿ ಕಾರ್ಮಿಕ ಚಳವಳಿ ದೊಡ್ಡ ಮಟ್ಟದಲ್ಲಿ ಬೆಳೆಯಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಕಾರ್ಮಿಕರೆಲ್ಲರೂ ಒಂದಾಗಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗಳು ಮತ್ತು ಕಾರ್ಪೋರೇಟ್ ನೀತಿಗಳನ್ನು ಜಾರಿಗೊಳಿಸುತ್ತಿರುವುದರಿಂದ ಕಾರ್ಮಿಕರು ಒಗ್ಗೂಡಬೇಕಾಗಿದೆ. ಬೆಲೆ ಏರಿಕೆ ವಿರುದ್ಧ ತೀವ್ರ ಸ್ವರೂಪದ ಹೋರಾಟ ಬರಬೇಕಾಗಿದೆ ಎಂದು ಹೇಳಿದರು.

ಪಾವಗಡದಲ್ಲಿ ನಿರುದ್ಯೋಗ ಪ್ರಮಾಣ ದೊಡ್ಡದಾಗಿದೆ: ಪಾವಗಡ ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ದೊಡ್ಡ ಪ್ರಮಾಣದಲ್ಲಿದೆ. ತಾಲೂಕಿನ ಗ್ರಾಮಾಂತರ ಪ್ರದೇಶದ ನೂರಾರು ಮಂದಿ ರಾಜ್ಯದ ಹೊರ ಜಿಲ್ಲೆಗಳಿಗೆ ವಲಸೆ ಹೋಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಯಾವ ಪಕ್ಷದ ಶಾಸಕರೂ ತಾಲೂಕಿನಲ್ಲಿ ಕಾರ್ಖಾನೆಗಳ ನಿರ್ಮಾಣಕ್ಕೆ ಪ್ರಯತ್ನ ಮಾಡಲಿಲ್ಲ. ಉದ್ಯೋಗವನ್ನು ನೀಡಲು ಮುಂದಾಗಲಿಲ್ಲ ಎಂದು ಆರೋಪಿಸಿದರು.

ಕಾರ್ಖಾನೆಗಳನ್ನು ನಿರ್ಮಾಣ ಮಾಡಿದರೆ ನೂರಾರು ಯುವಕ-ಯುವತಿಯರಿಗೆ ಉದ್ಯೋಗಗಳು ಸಿಗುತ್ತವೆ. ಇದರಿಂದ ಕುಟುಂಬಗಳು ಆರ್ಥಿಕವಾಗಿ ಶಕ್ತಿಯುತವಾಗುತ್ತವೆ ಎಂದರು.

ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕಿನ ಸ್ಥಳೀಯ ಕಾರ್ಮಿಕ ಮುಖಂಡರು ಹಾಜರಿದ್ದರು.

Ashika S

Recent Posts

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

5 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

19 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

8 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

8 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

9 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

9 hours ago