ತುಮಕೂರು: ವಿಳಾಸ ಕೇಳುವ ನೆಪದಲ್ಲಿ ಬೈಕಿನಲ್ಲಿ ಬಂದ ಕಳ್ಳರು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಬಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಂಡಿಹಳ್ಳಿ ಗ್ರಾಮದ ಜಯಮ್ಮ ತನ್ನ ಸರವನ್ನು ಕಳೆದುಕೊಂಡ ಮಹಿಳೆ. ಜಮೀನಿನ ಬಳಿ ಹಸುವನ್ನು ಮೇಯಿಸಲು ಹೋಗುವ ದಾರಿಯಲ್ಲಿ ಜಯಮ್ಮ ರಸ್ತೆ ಬದಿಯಲ್ಲಿ ನಿಂತಿದ್ದಾಗ, ಬಿಳಿ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ವಿಳಾಸ ಕೇಳುವ ನೆಪದಲ್ಲಿ ಸುಮಾರು 30 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾರೆ.
ಈ ಸಂಬಂಧ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.