News Karnataka Kannada
Monday, April 15 2024
Cricket
ತುಮಕೂರು

ತುಮಕೂರು ವಿವಿಯಲ್ಲಿ ಜುಲೈ 20, 21ರಂದು ಮಾಧ್ಯಮ ಹಬ್ಬ, ರಾಷ್ಟ್ರೀಯ ಸಮ್ಮೇಳನ

ತುಮಕೂರು
Photo Credit : News Kannada

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಜುಲೈ ೨೦ ಹಾಗೂ ೨೧ರಂದು ‘ಇಂಪ್ರೆಶನ್-೨೦೨೩’ ಮಾಧ್ಯಮ ಹಬ್ಬ ಹಾಗೂ ‘ಡಿಜಿಟಲ್ ಯುಗದಲ್ಲಿ ಮಾಧ್ಯಮ ಸಾಕ್ಷರತೆ’ ಕುರಿತು ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ.

ಜುಲೈ ೨೦ರಂದು ನಡೆಯುವ ಮಾಧ್ಯಮ ಹಬ್ಬವನ್ನು ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ್ ಬೆಳಗ್ಗೆ ೧೧ಕ್ಕೆ ಉದ್ಘಾಟಿಸಲಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಬಿ. ಕೆ. ರವಿ., ದುಬೈನ ಉನ್ನತ ತಂತ್ರಜ್ಞಾನ ಕಾಲೇಜಿನ ಅಪ್ಲೈಡ್‌ ಮಾಧ್ಯಮ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಎಂ., ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಭಾಗವಹಿಸಲಿದ್ದಾರೆ.

ಮಾಧ್ಯಮ ಹಬ್ಬದ ಅಂಗವಾಗಿ ವರದಿಗಾರಿಕೆ, ಸುದ್ದಿ ಪ್ರಸ್ತುತಿ, ರೇಡಿಯೋ ಜಾಕಿ, ಛಾಯಾಗ್ರಾಹಣ, ನುಡಿಚಿತ್ರ ಬರೆವಣಿಗೆ, ಪೋಸ್ಟರ್ ವಿನ್ಯಾಸ, ಪೀಸ್-ಟು-ಕ್ಯಾಮೆರಾ, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಜಾಹೀರಾತು ನಿರ್ಮಾಣ, ಕಿರುಚಿತ್ರ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಸ್ಪರ್ಧೆಗೆ ಮೂರು ಬಹುಮಾನಗಳನ್ನು ನೀಡಲಾಗುವುದು. ಅತಿಹೆಚ್ಚು ಅಂಕ ಗಳಿಸುವ ತಂಡಕ್ಕೆ ಸಮಗ್ರ ಚಾಂಪಿಯನ್‌ಶಿಪ್ ನೀಡಲಾಗುವುದು.

ಜುಲೈ ೨೧ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಸಮ್ಮೇಳನವನ್ನು ನವದೆಹಲಿಯ ಭಾರತೀಯ ಸಮೂಹ ಸಂವಹನ ಸಂಸ್ಥೆಯ ನವಮಾಧ್ಯಮ ವಿಭಾಗದ ಪ್ರಾಧ್ಯಾಪಕಿ ಡಾ. ಅನುಭೂತಿ ಯಾದವ್ ಬೆಳಗ್ಗೆ ೧೦ಕ್ಕೆ ಉದ್ಘಾಟಿಸಿ, ದಿಗ್ಸೂಚಿ ಭಾಷಣ ಮಾಡಲಿದ್ದರೆ.

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಮಾಧ್ಯಮ ಸಾಕ್ಷರತೆಯ ವಿವಿಧ ಆಯಾಮಗಳ ಬಗ್ಗೆ ದೇಶದ ವಿವಿಧ ಭಾಗಗಳಿಂದ ಆಗಮಿಸುವ ವಿದ್ವಾಂಸರು ತಮ್ಮ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಸಮ್ಮೇಳನದ ವಿವಿಧ ಗೋಷ್ಠಿಗಳ ಅಧ್ಯಕ್ಷತೆಯನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಓಂಕಾರಗೌಡ ಕಾಕಡೆ, ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಪ್ರೊ. ಸತೀಶ್ ಕುಮಾರ್, ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಸಪ್ನಾ ಎಂ. ಎಸ್., ದುಬೈನ ಉನ್ನತ ತಂತ್ರಜ್ಞಾನ ಕಾಲೇಜಿನ ಅಪ್ಲೈಡ್ ಮಾಧ್ಯಮ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಎಂ. ವಹಿಸಲಿದ್ದಾರೆ.

ಜುಲೈ ೨೧ ಸಂಜೆ ೩.೪೫ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾಧ್ಯಮ ಹಬ್ಬದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಲಾಗುವುದು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕ ಎಸ್. ನಾಗಣ್ಣ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಚಿ. ನಿ. ಪುರುಷೋತ್ತಮ್, ಉದ್ಯಮಿಗಳಾದ ಹೆಚ್. ಜಿ. ಚಂದ್ರಶೇಖರ್, ಆರ್. ಎಲ್. ರಮೇಶ್ ಬಾಬು, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್ ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು