Categories: ತುಮಕೂರು

ತುಮಕೂರು: ಕೈ ತಪ್ಪಿದ ಬಿಜೆಪಿ ಟಿಕೆಟ್‌, ಬೆಟ್ಟಸ್ವಾಮಿ ಆಸ್ಪತ್ರೆಗೆ ದಾಖಲು

ತುಮಕೂರು: ಬಿಜೆಪಿ ಎರಡನೇ ಪಟ್ಟಿಯಲ್ಲಿ ತಮಗೆ ಗುಬ್ಬಿ ಟಿಕೇಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾದ ಹಿಂದುಳಿದ ವರ್ಗಗಳ ಮುಖಂಡ ಜಿ.ಎನ್.ಬೆಟ್ಟ ಸ್ವಾಮಿ ಬುಧವಾರ ಮಧ್ಯರಾತ್ರಿ ಹೃದಯಬೇನೆ ಕಾಣಿಸಿಕೊಂಡಿದ್ದು, ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ  ದಾಖಲಾಗಿದ್ದಾರೆ.

ಮಧ್ಯ ರಾತ್ರಿ ಎರಡರ ಸಮಯದಲ್ಲಿ ಕುಟುಂಬಸ್ಥರು ಬೆಟ್ಟಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತಂದಿದ್ದು ಹೃದಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪರೀಕ್ಷೆ ಗೊಳಪಡಿಸಿ ಬೆಳಿಗ್ಗೆವರೆಗೆ ಚಿಕಿತ್ಸೆ ನೀಡಿದ್ದಾರೆ.

ಪಕ್ಷ ಟಿಕೆ ಟ್ ನೀಡಲಿಲ್ಲ ಎಂಬ ವಿಷಯದಲ್ಲಿ ಮಾನಸಿಕವಾಗಿ ಕುಗ್ಗಿದ್ದು, ಒತ್ತಡ ದಿಂದ ಹೃದಯಬೇನೆ ಉಂಟಾಗಿದ್ದು, ಹೃದಯಾಘಾತವಲ್ಲ ಎಂದು ತಿಳಿದ ಮೇಲೆ ಬೆಳಿಗ್ಗೆ ಯವರೆಗೆ ಆಸ್ಪತ್ರೆಯಲ್ಲಿ ಉಳಿದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ ಎಂದು ಆಸ್ಪತ್ರೆಯವರು ನೀಡಿದ ಮಾಹಿತಿಯಿಂದ ಖಚಿತವಾಗಿದೆ.

ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಜಿ. ಎನ್. ಬೆಟ್ಟ ಸ್ವಾಮಿಅವರ ಪಕ್ಷ ಯಾರಿಗೆ ಟಿಕೇಟ್ ನೀಡಿದರು ಬಿಜೆಪಿ ಗೆಲ್ಲಿಸಲು ಶ್ರಮಿಸುವುದಾಗಿ ಬೆಟ್ಟ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬೆಟ್ಟ ಸ್ವಾಮಿ ಅವರ ಈ ಹೇಳಿಕೆ ಹಿಂ ದೆ ಪಕ್ಷದ ವರಿಷ್ಠ ರೊಬ್ಬರು ಕರೆ ಮಾಡಿ ನಿಮಗೆ ಟಿಕೇಟ್ ಕನ್ಫರ್ಮ್ ಆಗಿದೆ. ಆದರೆ ಘೋಷಣೆ ಗೂ ಮುನ್ನ ಟಿಕೇಟ್ ಪೈಪೋಟಿಯ ಪರಿಸ್ಥಿತಿ ತಿಳಿಗೊಳಿಸಲು ಈ ರೀತಿ ಹೇಳಿಕೆ ಕೊಡಿ ಎಂದು ನಿರ್ದೇಶಿಸಿದ್ದರು ಎಂದು ತಿಳಿದುಬಂದಿದೆ.

ವರಿಷ್ಠರ ನಿರ್ದೇಶನದಂತೆ ಬೆಟ್ಟಸ್ವಾಮಿ ಅವರು ಹೇಳಿಕೆ ಕೊಟ್ಟಿದ್ದು ಹೇಳಿ ಕೆ ಕೊಟ್ಟ ಬೆನ್ನಿಗೆ ಟಿಕೇಟ್ ಕೈ ತಪ್ಪಿ ದಿಲೀಪ್ ಕುಮಾರ್ ಅವರಿಗೆ ದೊರೆತಿದ್ದು ಬೆಟ್ಟಸ್ವಾಮಿ ಅವರಿಗೆ ಆಘಾತ ಉಂಟು ಮಾಡಿದೆ ಎಂದು ಬಿಜೆಪಿ ವಲಯದಲ್ಲೇ ಚರ್ಚೆ ಯಾಗುತ್ತಿದೆ. ಈ ಮಧ್ಯೆ ಬೆಟ್ಟಸ್ವಾಮಿ ಅವರ ಹೇಳಿಕೆಯು ಒಳ ಒಪ್ಪಂದದ ಶಂಕೆಗೂ ಆಸ್ಪದ ಒದಗಿಸಿದ್ದು ಈ ಬೆಳವಣಿಗೆ ಗಳು ಚುನಾವಣೆಯಲ್ಲಿ ಯಾವ ರೀತಿ ಪರಿಣಾಮ ಬೀರುತ್ತವೆ ಎಂದು ಕಾದು ನೋಡಬೇಕಿದೆ.

Gayathri SG

Recent Posts

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

4 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

25 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

39 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

56 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago