News Karnataka Kannada
Saturday, May 04 2024
ತುಮಕೂರು

ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ: ಇಬ್ಬರು ಸಾವು

ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
Photo Credit : NewsKarnataka

ತುಮಕೂರು: ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್​ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರನ್ನು ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಎಂದು ಗುರುತಿಸಲಾಗಿದೆ. ಇಬ್ಬರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎಂದು ತಿಳಿದು ಬಂದಿದೆ.

ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ನಡೆದ ಅಪಘಾತ ಸಂಭವಿಸಿದೆ. ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ, ಹಿಂಬದಿಯಿಂದ ಬೊಲೆರೋ ಪಿಕಪ್​ ಡಿಕ್ಕಿಯಾಗಿ, ಬೊಲೆರೋ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಬೊಲೆರೋ ವಾಹನ ಚಾಲಕನಿಗೆ ಗಾಯವಾಗಿದೆ. ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು