ತುಮಕೂರು: ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಎಂದು ಗುರುತಿಸಲಾಗಿದೆ. ಇಬ್ಬರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎಂದು ತಿಳಿದು ಬಂದಿದೆ.
ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ನಡೆದ ಅಪಘಾತ ಸಂಭವಿಸಿದೆ. ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ, ಹಿಂಬದಿಯಿಂದ ಬೊಲೆರೋ ಪಿಕಪ್ ಡಿಕ್ಕಿಯಾಗಿ, ಬೊಲೆರೋ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಬೊಲೆರೋ ವಾಹನ ಚಾಲಕನಿಗೆ ಗಾಯವಾಗಿದೆ. ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…