Categories: ತುಮಕೂರು

ಐತಿಹಾಸಿಕ ಮಹತ್ವವುಳ್ಳ ಕುಣಿಗಲ್: ಹರಪನಹಳ್ಳಿಯಲ್ಲಿ ಅಪ್ರಕಟಿತ ಶಿಲಾಶಾಸನ ಪತ್ತೆ

ತುಮಕೂರು: ಕುಣಿಗಲ್ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಪ್ರಮುಖ ಶಿಲಾಶಾಸನವೊಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಪತ್ತೆಯಾಗಿದೆ. ಹರಪನಹಳ್ಳಿಯ ಅರಸಿಕೆರೆ ಏರಿ ಸಮೀಪದ ಈಶ್ವರ ದೇವಾಲಯದಲ್ಲಿ ಈ ಶಾಸನ ದೊರೆತಿದೆ.

ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಎಂ. ಕೊಟ್ರೇಶ್ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಸುಧಾ ಜೆ. ಅವರ ಸಂಶೋಧನೆಯಿAದ ಈ ಶಾಸನದ ವಿವರಗಳು ಬೆಳಕಿಗೆ ಬಂದಿವೆ.

“ಇದು ಹನ್ನೊಂದನೆಯ ಶತಮಾನಕ್ಕೆ ಸಂಬAಧಿಸಿದ ಅಪ್ರಕಟಿತ ಶಿಲಾಶಾಸನವಾಗಿದ್ದು 6ನೇ ವಿಕ್ರಮಾದಿತ್ಯನ ಕಾಲದ್ದಾಗಿದೆ,” ಎಂದು ಪ್ರೊ. ಕೊಟ್ರೇಶ್ ತಿಳಿಸಿದ್ದಾರೆ.

ಹರಪನಹಳ್ಳಿ ವ್ಯಾಪ್ತಿಯ ಅರಸಿಕೆರೆಯಲ್ಲಿ ಈ ಶಾಸನವು ಹಲವಾರು ವರ್ಷಗಳಿಂದ ಹೂತು ಹೋಗಿತ್ತು. ಹೂಳೆತ್ತುವ ಸಂದರ್ಭದಲ್ಲಿ ಪತ್ತೆಯಾದ ಈ ಶಾಸನವನ್ನು ಸ್ಥಳೀಯರು ಸ್ವಚ್ಛಗೊಳಿಸಿ ಸಮೀಪದ ಈಶ್ವರ ದೇವಾಲಯದಲ್ಲಿ ಸ್ಥಾಪಿಸಿದರು ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಶಾಸನ ಪತ್ತೆಯಾಗುವುದರೊಂದಿಗೆ
ಕಲ್ಯಾಣ ಚಾಳುಕ್ಯರ ವಿಕ್ರಮಾದಿತ್ಯನ ಕಾಲದ ಶಾಸನಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿದೆ.

ಶಾಸನವು ಕಪ್ಪುಮಿಶ್ರಿತ ನೀಲಿ ಛಾಯೆಯ ಲಿಪಿಯಲ್ಲಿ ಒಟ್ಟು 28 ಸಾಲುಗಳನ್ನು ಒಳಗೊಂಡಿದೆ. ಇದು 1099ರಲ್ಲಿ ರಚನೆಯಾಗಿರಬಹುದೆಂದು ಊಹಿಸಲಾಗಿದೆ. ಕ್ರಿ.ಶ. 11ನೇ ಶತಮಾನದಲ್ಲಿಯೇ ತುಮಕೂರು ಜಿಲ್ಲೆಯ ಕುಣಿಗಲ್ ಕುಣಿಂಗಿಲು ನಾಡೆಂದು ಪ್ರಸಿದ್ಧಿ ಹೊಂದಿರುವುದು, ಚಾಳುಕ್ಯ 6ನೇ ವಿಕ್ರಮಾದಿತ್ಯನ ಆಳ್ವಿಕೆ ಕುಣಿಂಗಿಲು ನಾಡವರೆಗೂ ಹಬ್ಬಿರುವುದು ಸದರಿ ಶಾಸನದಿಂದ ತಿಳಿದುಬರುತ್ತದೆ. ಶಾಸನದಲ್ಲಿರುವ ಮಾಹಿತಿಯಂತೆ ಆಗ ಕುಣಿಂಗಿಲು ನಾಡನ್ನು ಜಕ್ಕಿಸೆಟ್ಟಿ ಎಂಬಾತನು ಆಳುತ್ತಿದ್ದನು. ಶಾಸನದ ಕಲ್ಲು ಸುಮಾರು 5 ಅಡಿ ಎತ್ತರ ಹಾಗೂ 3 ಅಡಿ ಅಗಲವಿದ್ದು, ಶಾಸನದ ಮೇಲ್ಬಾಗದ ಪಟ್ಟಿಕೆಯಲ್ಲಿ 52 ವರ್ಷಕ್ಕಿಂತಲು ಹೆಚ್ಚು ಕಾಲ ಗುರುಸ್ಥಾನವನ್ನು ಅಲಂಕರಿಸಿದ ವರೇಶ್ವರ ಪಂಡಿತರು ಶಿವಲಿಂಗಕ್ಕೆ
ಕೈಮುಗಿದು ನಿಂತಿರುವಂತಹ ಚಿತ್ರವಿದೆ.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago