ತುಮಕೂರು: ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಬಾಲಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಪೋಕ್ಸೊ ಕೇಸ್ನಡಿ ಸ್ವಾಮೀಜಿ ಹಾಗೂ ಆಪ್ತ ಸಹಾಯಕ ಅಭಿಲಾಷ್ನನ್ನು ಬಂಧಿಸಲಾಗಿದೆ. ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಸ್ವಾಮೀಜಿ ದೂರು ದಾಖಲಿಸಿದ್ದರು. ಕಳೆದ ಫೆಬ್ರುವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತನಿಂದ ಸ್ವಾಮೀಜಿ ಎಫ್ಐಆರ್ ದಾಖಲು ಮಾಡಿದ್ದರು.
ಸ್ವಾಮೀಜಿಯ ಸೇವಕ ಅಭಿಷೇಕ್ ಅಂಡ್ ಟೀಂ ನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿಂತೆ ಒಟ್ಟು 6 ಜನರ ಮೇಲೆ ದೂರು ನೀಡಲಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.