News Karnataka Kannada
Wednesday, May 01 2024
ತುಮಕೂರು

ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ !

Tumakur
Photo Credit : NewsKarnataka

ತುಮಕೂರು: ರಾಮನವಮಿ ಪಾನಕ ಸೇವಿಸಿದ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿತ್ತು.

ಸಂಜೆಯಾಗುತ್ತಿದ್ದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಲ್ಲೂಕು ಆರೋಗ್ಯ ಅಧಿಕಾರಿ ಮರಿಯಪ್ಪ, ಆಡಳಿತಾಧಿಕಾರಿ ಗಣೇಶಬಾಬು ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ದೋಷ ಪೂರಿತ ಪಾನಕ ಸೇವನೆಯೇ ಘಟನೆಗೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಾಸಕ ಡಾ.ರಂಗನಾಥ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು