ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಆರೋಪಿಗಳ ವಿರುದ್ಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.