ಬೆಂಗಳೂರು: ಜೆಡಿಎಸ್ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ ಮೇಲೆ ಆ ಪಕ್ಷದ ಹಲವರು ನಾಯಕರು ಮುನಿಸಿಕೊಂಡಿದ್ದಾರೆ. ಈ ಮೊದಲು ಸಿಎಂ ಇಬ್ರಾಹಿಂ ಜೆಡಿಎಸ್ ನಾಯಕರ ವಿರುದ್ಧ ಗುಡುಗಿದ್ದರು. ನಂತರ ಜೆಡಿಎಸ್ ನಾಯಕ ಎಚ್ಡಿಕೆ ಶಾಸಕರ ಸಭೆ ನಡೆಸಿದ್ದರು.
ಆದರೆ ಜೆಡಿಎಸ್ ನಿಂದ ಹೊರಹೋಗುವ ನಾಯಕರ ವಲಸೆ ಕಾರ್ಯ ಮಾತ್ರ ನಿಂತಿಲ್ಲ. ಇಂದು ಅದೇ ಪಕ್ಷಾಂತರ ಪರ್ವದ ಮುಂದಿನ ಭಾಗ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್, ಗೌರಿಶಂಕರ್ ಕಾಂಗ್ರೆಸ್ ಸೇರಿದರು.
ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ. ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಡಿ.ಸಿ. ಗೌರಿಶಂಕರ್ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.
ಇವರಿಗೆ ಗೃಹ ಸಚಿವ ಪರಮೇಶ್ವರ್ ಅವರ ಬೆಂಬಲವೂ ಇತ್ತು. ಆದರೆ, ಸಹಕಾರ ಸಚಿವರಾಗಿರುವ ಕೆ.ಎನ್. ರಾಜಣ್ಣ ಅವರು ಡಿ.ಸಿ. ಗೌರಿಶಂಕರ್ ಅವರ ಪಕ್ಷ ಸೇರ್ಪಡೆಯ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದಿದ್ದರು.
KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ನ ಗೌರಿಶಂಕರ್ ಹಾಗೂ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ… pic.twitter.com/nmXJbWNqTr
— Siddaramaiah (@siddaramaiah) November 15, 2023