ಜೆಡಿಎಸ್‌ ಗೆ ಬಿಗ್‌ ಶಾಕ್‌: ಜೆಡಿಎಸ್‌ ನ ಇಬ್ಬರು ಮಾಜಿ ಶಾಸಕರು ಕೈ ಸೇರ್ಪಡೆ

ಬೆಂಗಳೂರು: ಜೆಡಿಎಸ್‌ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ ಮೇಲೆ ಆ ಪಕ್ಷದ ಹಲವರು ನಾಯಕರು ಮುನಿಸಿಕೊಂಡಿದ್ದಾರೆ. ಈ ಮೊದಲು ಸಿಎಂ ಇಬ್ರಾಹಿಂ ಜೆಡಿಎಸ್‌ ನಾಯಕರ ವಿರುದ್ಧ ಗುಡುಗಿದ್ದರು. ನಂತರ ಜೆಡಿಎಸ್‌ ನಾಯಕ ಎಚ್‌ಡಿಕೆ ಶಾಸಕರ ಸಭೆ ನಡೆಸಿದ್ದರು.

ಆದರೆ ಜೆಡಿಎಸ್‌ ನಿಂದ ಹೊರಹೋಗುವ ನಾಯಕರ ವಲಸೆ ಕಾರ್ಯ ಮಾತ್ರ ನಿಂತಿಲ್ಲ. ಇಂದು ಅದೇ ಪಕ್ಷಾಂತರ ಪರ್ವದ ಮುಂದಿನ ಭಾಗ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್​, ಗೌರಿಶಂಕರ್ ಕಾಂಗ್ರೆಸ್ ಸೇರಿದರು.

ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ. ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಡಿ.ಸಿ. ಗೌರಿಶಂಕರ್‌ ಅವರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕುಣಿಗಲ್‌ ಶಾಸಕ ಡಾ. ರಂಗನಾಥ್‌ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.

ಇವರಿಗೆ ಗೃಹ ಸಚಿವ ಪರಮೇಶ್ವರ್‌ ಅವರ ಬೆಂಬಲವೂ ಇತ್ತು. ಆದರೆ, ಸಹಕಾರ ಸಚಿವರಾಗಿರುವ ಕೆ.ಎನ್‌. ರಾಜಣ್ಣ ಅವರು ಡಿ.ಸಿ. ಗೌರಿಶಂಕರ್‌ ಅವರ ಪಕ್ಷ ಸೇರ್ಪಡೆಯ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದಿದ್ದರು.

Ashika S

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

13 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

15 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

35 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

47 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

56 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago