ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಬಳಿ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಅತ್ತಿಬೆಲೆ ಬಳಿಯ ಹೊಸೂರು ರಸ್ತೆಯಲ್ಲಿ ಸಂಭವಿಸಿದ ಅಪಘಾತದ ನಂತರ ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬಲಿಯಾದವರಲ್ಲಿ ಒಬ್ಬನನ್ನು ಮಂಜಪ್ಪ(32) ಎಂದು ಗುರುತಿಸಲಾಗಿದ್ದು, ಎರಡನೇ ವ್ಯಕ್ತಿಯ ಗುರುತು ಇನ್ನೂ ತಿಳಿದು ಬಂದಿಲ್ಲ. ಬೈಕ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.