ಬೆಂಗಳೂರು

ಬೆಂಗಳೂರಿನಲ್ಲಿ ಕಟ್ಟಡ ಮೇಲಿಂದ ವಾಟರ್​ ಟ್ಯಾಂಕ್​ ಬಿದ್ದು ಇಬ್ಬರು ದುರ್ಮರಣ

ಬೆಂಗಳೂರು: ಶಿವಾಜಿನಗರದ ಬಸ್​ ನಿಲ್ದಾಣದ ಬಳಿ ಎಗ್ ರೈಸ್ ಮಾರಾಟ ಮಾಡುತ್ತಿದ್ದವನ ಸೇರಿ ತಿನ್ನಲು ಬಂದಿದ್ದ ವ್ಯಕ್ತಿಯ ಮೇಲೂ ನಾಲ್ಕು ಅಂತಸ್ತಿನ ಮೇಲಿದ್ದ ವಾಟರ್ ಟ್ಯಾಂಕ್ ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನುಳಿದಂತೆ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಿಂದ ಬಚಾವ್​ ಆಗಿದ್ದಾರೆ. ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೀರು ತುಂಬಿದ್ದ ಸಿಂಟ್ಯಾಕ್ಸ್​ನಿಂದ ನೀರು ಲೀಕ್​ ಆಗಿ ಗೋಡೆ ವೀಕ್ ಆಗಿದೆ. ಈ ಹಿನ್ನಲೆ ಗೋಡೆ ಹಾಗೂ ಟ್ಯಾಂಕ್ ಎರಡೂ ಕುಸಿದು, ಕೆಳಗಡೆ ವ್ಯಾಪಾರ ಮಾಡುತ್ತಿದ್ದವನ ಜೊತೆಗೆ ಅಂಗಡಿಗೆ ಬಂದಿದ್ದ ಗಿರಾಕಿಯ ಮೇಲೂ ಬಿದ್ದ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಶಿವಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೇಲ್ನೋಟಕ್ಕೆ ಟ್ಯಾಂಕ್​ನ ಗೋಡೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಮಾಹಿತಿ ಇದ್ದು, ಬಿಬಿಎಂಪಿ ಪರೀಶೀಲನೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಬೆಂಗಳೂರು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್​ ಹೇಳಿದ್ದಾರೆ.

 

Ashitha S

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

22 seconds ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

18 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

46 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago