News Karnataka Kannada
Sunday, April 28 2024
ಬೆಂಗಳೂರು

ವಿಧಾನಪರಿಷತ್‌ ಸದಸ್ಯರಾಗಿ ಉಮಾಶ್ರೀ, ಸೀತಾರಾಂ, ಸುಧಾಮ್‌ದಾಸ್‌ ಪ್ರಮಾಣ ವಚನ ಸ್ವೀಕಾರ

Umashree, Sitaram, Sudam Das take oath as council members
Photo Credit : News Kannada

ಬೆಂಗಳೂರು: ವಿಧಾನಸೌಧದಲ್ಲಿಂದು ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಟಿ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಹೆಚ್.ಪಿ. ಸುಧಾಮ್‌ದಾಸ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ. ಪಾಟೀಲ್, ಎನ್.ಎಸ್. ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಇದ್ದಾರೆ.

ವಿಧಾನ ಪರಿಷತ್‌ಗೆ ನೂತನವಾಗಿ ನಾಮಕರಣಗೊಂಡಿರುವ ಮೂವರು ಸದಸ್ಯರುಗಳ ಪ್ರಮಾಣವಚನ ಕಾರ್ಯಕ್ರಮ ಇಂದು ನಡೆಯಿತು. ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡಿರುವ ಎಂ.ಆರ್ ಸೀತಾರಾಮ್, ಉಮಾಶ್ರೀ ಮತ್ತು ಸುಧಾಮ್‌ದಾಸ್ ಇವರುಗಳು ಇಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್.ಕೆ ಪಾಟೀಲ್, ಬೋಸರಾಜು, ಪರಿಷತ್‌ನ ಸರ್ಕಾರಿ ಮುಖ್ಯಸಚೇತಕ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು