Bengaluru 22°C
Ad

ಉತ್ತರಾಖಂಡ ಹಿಮಪಾತ: ನಾಳೆ ಬೆಳಿಗ್ಗೆ 9 ಮೃತದೇಹ ಬೆಂಗಳೂರಿಗೆ ಆಗಮನ

Uk

ಬೆಂಗಳೂರು: ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದಂತ ಕರ್ನಾಟಕದ 9 ಮಂದಿ ಹವಾಮಾನ ವೈಪರಿತ್ಯದ ಕಾರಣ, ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ನಾಳೆ ಬೆಳಿಗ್ಗೆ ಬೆಂಗಳೂರಿಗೆ ತರಲಾಗುತ್ತಿದೆ. ಅಲ್ಲದೇ ಬದುಕಿಳಿದಂತ 13 ಮಂದಿಯೂ ವಾಪಾಸ್ ಆಗುತ್ತಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ಉತ್ತರಾಖಂಡದಲ್ಲಿ ಹವಾಮಾನ ವೈಪರಿತ್ಯದಿಂದ ಮೃತ 9 ಜನ ಚಾರಣಿಗರ ದೇಹಗಳನ್ನು ಎಂಬಾಮಿಂಗ್‌ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಎಂಬಾಮಿಂಗ್ ನಂತರ ಮೃತದೇಹಗಳನ್ನು ಆಂಬ್ಯುಲೆನ್ಸ್‌ಗಳ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗುತ್ತದೆ ಎಂದಿದ್ದಾರೆ.

Ad
Ad
Nk Channel Final 21 09 2023
Ad