ಬೆಂಗಳೂರು: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ. ನಗರದ ದೇವಸ್ಥಾನಗಳಲ್ಲಿ ಶುಕ್ರವಾರವೇ ಹಬ್ಬದ ವಾತಾವರಣ ಮನೆಮಾಡಿತ್ತು. ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲು ಮುಟ್ಟಿದೆ.
ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ತಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೇ ವೈಕುಂಠನಿಗೆ ವಿಶೇಷ ಪೂಜೆ ಆರಂಭವಾಗಿದೆ.
ವೆಂಕಟೇಶ್ವರನಿಗೆ ಪಂಚಾಭಿಷೇಕ ಮಾಡಿ, ಪುಷ್ಪಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.