Bengaluru 29°C
Ad

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಪಿ. (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಪಿ. (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾಗಿರುವ ₹187 ಕೋಟಿ ಅವ್ಯವಹಾರವು ಕಾಂಗ್ರೆಸ್‌ನ ಮಿಷನ್ ಕಮಿಷನ್‌ಗೆ ತೆರೆ ಎಳೆದಿದೆ ಎಂದರು.

ಅಹಿಂದ ಪರ ಎಂದು ಭಾಷಣ ಬಿಗಿಯುವ ಇವರು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಕಲ್ಲು ಹಾಕುವುದಲ್ಲದೇ, ಅಭಿವೃದ್ಧಿ ನಿಗಮದಿಂದ ಕೊಳ್ಳೆ ಹೊಡೆದು, ಅಲ್ಲಿನ ಅಮಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆಗೀಡಾಗುವಂತೆ ಮಾಡಿರುವುದು ದೌರ್ಭಾಗ್ಯ.

ಈ ಪರಿಯ ಅವ್ಯವಹಾರ ಇಲಾಖೆಯ ಸಚಿವರ ಮೂಗಿನಡಿಯಲ್ಲೇ ನಡೆದರೂ ಅವರಿಗೆ ಅರಿವಿಲ್ಲ ಎಂಬುದು ಹಾಸ್ಯಾಸ್ಪದ ಹಾಗೂ ನಂಬಲಸಾಧ್ಯ. ಬಿ.ನಾಗೇಂದ್ರ ಅವರನ್ನು ವಜಾಗೊಳಿಸಿ, ಪಾರದರ್ಶಕ ತನಿಖೆ ಈ ಕೂಡಲೇ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad