Ad

ವಾಲ್ಮೀಕಿ ಹಗರಣ: ಎಸ್‌ಐಟಿ ತಂಡದಿಂದ ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದಲ್ಲಿ ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ. ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

Ad
Ad
Nk Channel Final 21 09 2023