Bengaluru 28°C
Ad

ವಾಲ್ಮೀಕಿ ನಿಗಮ ಹಗರಣ: ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಬಂಧನ

ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ.

ಇದೇ ವೇಳೆ ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ್ ಎಂಬುವನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು.

ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ. ಈ ಹಣ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಮೇರೆಗೆ ಅವರನ್ನೂ ವಶಕ್ಕೆ ಪಡೆದಿದ್ದಾರೆ.

ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಬೊಕ್ಕಸದಿಂದ ಆಂಧ್ರ ಹಣ ವರ್ಗಾವಣೆಯಾಗಿತ್ತಾ ಎಂಬ ಅನುಮಾನ ಮೂಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಅದೇ ಆಯಾಮದಲ್ಲಿ ಎಸ್ ಐಟಿ ತನಿಖೆ ನಡೆಸುತ್ತಿದೆ.

 

Ad
Ad
Nk Channel Final 21 09 2023
Ad