ಬೆಂಗಳೂರು: ರಾಜ್ಯದಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿಯನ್ನೂ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟಂತೆ ಒಬ್ಬ ಅಧಿಕಾರಿಯೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರಿ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯ ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹೊರಗೆ ಬಮದಿದತ್ತು. ಇದನ್ನು ತನಿಖೆ ಮಾಡಲು ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ ಮಾಡಿತ್ತು.

ಇದರ ಬೆನ್ನಲ್ಲಿಯೇ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಹಗರಣ ನಡೆದಿದ್ದು, ಹವಾಲಾ ಕೂಡ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಸಿನ ತನಿಖೆಗೆ ಆಗಮಿಸಿದ ಜಾರಿ ನಿರ್ದೇಶನಾಲಯ (ಇ.ಡಿ) ಎಸ್‌ಐಟಿಯಿಂದ ಎಲ್ಲ ಮಾಹಿತಿಯನ್ನು ಪಡೆದು ತನಿಖೆ ಮುಂದುವರೆಸಿತ್ತು