ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಸೋಮವಾರ ಪ್ರಕಟವಾಗಲಿದೆ.
ಬಹುತೇಕ 12 ಗಂಟೆ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ. ಹಾಗಾಗಿ ಇವತ್ತು ಸಿಟಿ ಸಿವಿಲ್ ನ್ಯಾಯಾಲಯದತ್ತ ಚಿತ್ತ ನೆಟ್ಟಿದೆ. ಈಗಾಗಲೇ ನಾಗೇಂದ್ರ ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿದ್ದಾರೆ. ಸದ್ಯ ಸೆಂಟ್ರಲ್ ಜೈಲಲ್ಲಿರೋ ಮಾಜಿ ಸಚಿವರಿಗೆ ಬೇಲ್ ಸಿಕ್ಕಿದರಷ್ಟೇ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ಇದೇ ಅಕ್ಟೋಬರ್ 5ರಂದು ಸಲ್ಲಿಸಿತ್ತು.
ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

