ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋಂದು ಹಗರಣ ಹೊರ ಬಿದ್ದಿದೆ.  ಈ ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಚಿನ್ನದ ಬಾಸ್ಕೆಟ್ ಪತ್ತೆಯಾಗಿದೆ. ಬರೋಬ್ಬರಿ 10 ಕೆ.ಜಿ‌.ಚಿನ್ನದ ಬಿಸ್ಕೆಟ್​ಗಳನ್ನು ಎಸ್ಐಟಿ ತಂಡ ವಶಕ್ಕೆ ಪಡೆದಿದೆ ಎಂದು ಎಸ್​ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಆರೋಪಿ ಸತ್ಯನಾರಾಯಣ್ ವರ್ಮಾ ವಾಲ್ಮೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿದ್ದ. ಎಸ್ಐಟಿ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದ ವೇಳೆ 15 ಕೆ.ಜಿ.ಗೋಲ್ಡ್ ಕೊಡುವುದಾಗಿ ಹೇಳಿದ್ದ. ಅದರಂತೆ ತನ್ನ ಹೈದರಾಬಾದ್ ಪ್ಲಾಟ್ ನಲ್ಲಿ 10 ಕೆ.ಜಿ.ಚಿನ್ನದ ಗಟ್ಟಿ ಇಟ್ಟಿರುವುದನ್ನು ತೋರಿಸಿದ್ದಾನೆ. ಉಳಿದ ಚಿನ್ನದ ಬಿಸ್ಕೆಟ್ ಗಾಗಿ ಎಸ್​ಐಟಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ವರ್ಮಾ ಇದುವರೆಗೂ ವಾಲ್ಮೀಕಿ ಹಗರಣದ ಹಣದಿಂದ ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.